ಬರಾಕ್-8 ಕ್ಷಿಪಣಿ ಪರೀಕ್ಷೆ ಯಶಸ್ವಿ

ಈ ಸುದ್ದಿಯನ್ನು ಶೇರ್ ಮಾಡಿ

Barak

ಭುವನೇಶ್ವರ್.ಸೆ.20 : ಇಸ್ರೇಲ್ ದೇಶದೊಂದಿಗೆ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಬರಾಕ್-8 ಕ್ಷಿಪಣಿಯನ್ನು ಒರಿಸ್ಸಾದ ಸಮುದ್ರ ತೀರದ ರಕ್ಷಣಾ ಇಲಾಖೆಯ ನೆಲೆಯಿಂದ ಭಾರತ ಯಶಸ್ವಿಯಾಗಿ ಪರೀಕ್ಷಿಸಿದೆ. ನೆಲದಿಂದ ಗಾಳಿಗೆ ಜಿಗಿಯುವ ಕ್ಷಿಪಣಿಯನ್ನು ಚಂಡೀಪುರದ ಇಂಟಿಗ್ರೇಟೆಡ್ ಟೆಸ್ಟ್ ರೇಂಜ್ನೆಲೆಯಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು. ಬಾಲಾಸೋರ್ ಜಿಲ್ಲೆಯ ಐಟಿರ್ ಕಾಂಪ್ಲೆಕ್ಸ್ ನಿಂದ ಮೊಬೈಲ್ ಲಾಂಚರ್ ಮೂಲಕ ಕ್ಷಿಪಣಿಯನ್ನು ಹಾರಿಸಲಾಗಿದೆ. ಶೀಘ್ರದಲ್ಲೇ ಇನ್ನು ಹಲವು ಸುತ್ತುಗಳ ಪರೀಕ್ಷೆಯನ್ನು ಡಿ ಆರ್ ಡಿ ಒ ಹಮ್ಮಿಕೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಈ ಕ್ಷಿಪಣಿಯನ್ನು ಡಿ ಆರ್ ಡಿ ಒ ಮತ್ತು ಇಸ್ರೇಲ್ ಏರೋಸ್ಪೇಸ್ ಇಂಡಸ್ಟ್ರೀಸ್ ಜಂಟಿಯಾಗಿ ನಿರ್ಮಿಸಿವೆ.

70 ಕಿಲೋಮೀಟರ್ ನಿಂದ 90 ಕಿಲೋಮೀಟರ್ ತ್ರಿಜ್ಯದಲ್ಲಿ ಗುರಿಯನ್ನು ಹೊಡೆಯುವ ಸಾಮರ್ಥ್ಯವನ್ನು ಈ ಕ್ಷಿಪಣಿ ಹೊಂದಿದ್ದು, ವಾಯುದಾಳಿಯ ಸಮಯದಲ್ಲಿ ರಕ್ಷಣೆಗಾಗಿ ಬಳಸಲು ಅಭಿವೃದ್ಧಿಪಡಿಸಲಾಗಿದೆ. ಎಲ್ಲಾ ಪರೀಕ್ಷೆಗಳು ಪೂರ್ಣಗೊಂಡ ನಂತರ ಭೂಸೇನೆ, ವಾಯುಸೇನೆ ಹಾಗೂ ನೌಕಾ ಸೇನೆಯಲ್ಲೂ ಬಳಸಿಕೊಳ್ಳಲು ಭಾರತೀಯ ಸೇನೆ ತೀರ್ಮಾನಿಸಿದೆ.

► Follow us on –  Facebook / Twitter  / Google+

Facebook Comments

Sri Raghav

Admin