ಬರ ಅಧ್ಯಯನ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಕೆ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ಚಿತ್ರದುರ್ಗ, ಜ.27- ಬರ ವೀಕ್ಷಣೆ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದಿಲ್ಲಿ ತಿಳಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು, ಚಳ್ಳಕೆರೆ ತಾಲೂಕಿನ ವಿವಿಧೆಡೆ ಬರ ವೀಕ್ಷಣೆ ನಡೆಸಿ ಖಂಡೇನಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಬರ ತಾಂಡ ವವಾಡುತ್ತಿದೆ. ಬೆಳೆ ವಿಫಲವಾಗಿ ಜಿಲ್ಲೆಯ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು. ಬರ ವೀಕ್ಷಣೆ ವರದಿಯನ್ನು ಸರ್ಕಾರಕ್ಕೆ ನೀಡುವುದಾಗಿ ತಿಳಿಸಿದ ಅವರು, ಅದಿವೇಶನದಲ್ಲೂ ಸಹ ಬರ, ರೈತರ ಸ್ಥಿತಿಗತಿ ಬಗ್ಗೆ ಚರ್ಚೆ ನಡೆಸುವುದಾಗಿ ತಿಳಿಸಿದರು.

ರಾಜ್ಯದಿಂದ ಕೊಟ್ಟಿರುವ ವರದಿಗೆ ಸ್ಪಂದಿಸಿ ಕೇಂದ್ರದಿಂದ ಪರಿಹಾರ ಕೊಡಿಸುವುದಾಗಿ ಭರವಸೆ ನೀಡಿದ ಅವರು, ರಾಜ್ಯದ ಬಗ್ಗೆ ಮೋದಿ ಸರ್ಕಾರ ಎಂದಿಗೂ ತಾರತಮ್ಯ ಮಾಡುವುದಿಲ್ಲ ಎಂದರು.

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಕೊಡದಿರುವುದು ನೋವು ತಂದಿದೆ. ಶ್ರೀಗಳಿಗೆ ಭಾರತರತ್ನಕ್ಕಾಗಿ ಶಕ್ತಿಮೀರಿ ಪ್ರಯತ್ನಿಸಿದ್ದೇವೆ ಎಂದ ಅವರು, ಈ ವಿಚಾರ ಎಲ್ಲರಿಗಿಂತ ಹೆಚ್ಚು ನನಗೆ ನೋವುಂಟುಮಾಡಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಶಾಸಕ ಆನಂದ್‍ಸಿಂಗ್ ಹಾಗೂ ಗಣೇಶ್ ನಡುವಿನ ಮಾರಾಮಾರಿ ಪ್ರಕರಣದ ಕುರಿತು ಪ್ರತಿಕ್ರಿಯಿಸಲು ಯಡಿಯೂರಪ್ಪ ನಿರಾಕರಿಸಿದರು.
ಬರ ಕುರಿತು ರೈತರು ಹಾಗೂ ಸಾರ್ವಜನಿಕರೊಂದಿಗೆ ಚರ್ಚೆ ನಡೆಸಿದ ಅವರು, ಬರಕ್ಕೆ ತುತ್ತಾಗಿರುವ ರೈತರ ಜಮೀನು ಹಾಗೂ ತೋಟಗಳ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ, ಪೂರ್ಣಿಮಾ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹಾಜರಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin