ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ : ಬಿಎಸ್‍ವೈ ತರಾಟೆ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ಬೆಂಗಳೂರು, ಜ.15-ರಾಜ್ಯದಲ್ಲಿ ಭೀಕರ ಬರಪರಿಸ್ಥಿತಿ ಉಂಟಾಗಿದ್ದು, ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಶಾಲೆಗಳಲ್ಲಿ ಜನ-ಜಾನುವಾರುಗಳಿಗೆ ಸೂಕ್ತ ಸೌಲಭ್ಯಗಳಿಲ್ಲ. ಸರ್ಕಾರ ತಕ್ಷಣವೇ ಸೌಲಭ್ಯಗಳನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.  ಪಕ್ಷದಲ್ಲಿ ಉಂಟಾಗಿರು ಬಿಕ್ಕಟ್ಟಿನ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್‍ವೈ, ಅತೃಪ್ತರೆನಿಸಿದ ಭಾನುಪ್ರಕಾಶ್ ಸೇರಿದಂತೆ ಕೆಲವರ ಜೊತೆ ಮಾತುಕತೆ ನಡೆಸಲು ಅವರ ಸಮಸ್ಯೆ ಕೇಳಲು ಇದೇ 19 ರಂದು ಚರ್ಚೆಗೆ ಆಹ್ವಾನಿಸಲಾಗಿದೆ.

ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಪಕ್ಷದ ಅಸಮಾಧಾನದ ಬಗ್ಗೆ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು. ಇದಕ್ಕೂ ಮುನ್ನ 17 ರಂದು ಕೇಶವಕೃಪಾದಲ್ಲಿ ಕೆಲ ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಮುಖಂಡರು ಸಭೆ ಕರೆದಿದ್ದಾರೆ. ಅದರ ಬಗ್ಗೆ ಚರ್ಚಿಸಲು ಹೋಗುತ್ತಿರುವುದಾಗಿ ಹೇಳಿದ ಅವರು, ಯಾವುದೇ ಅತೃಪ್ತರು ಬರೆದಿರುವ ಪತ್ರ ನನಗೆ ತಲುಪಿಲ್ಲ ಎಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ವಿಶೇಷ ಸಂದರ್ಭದಲ್ಲಿ ನಾವು ಸೇರುವುದು ಸಾಮಾನ್ಯ. ಅದೇ ರೀತಿ ನಾವು ಸೇರಿ ಚರ್ಚಿಸುತ್ತೇವೆ ಎಂದು ತಿಳಿಸಿದರು. ಇದೇ 21 ಮತ್ತು 22 ರಂದು ರಾಜ್ಯ ಕಾರ್ಯಕಾರಿಣಿ ಕಲಬುರಗಿಯಲ್ಲಿ ನಡೆಯಲಿದ್ದು, ಈಶ್ವರಪ್ಪ ಈ ವೇಳೆ ಬರದ ವಿಷಯದ ಕುರಿತು ವಿಶೇಷ ವಿಷಯ ಮಂಡಿಸಲಿದ್ದಾರೆ ಎಂದು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin