ಬರ ಪರಿಹಾರ ವಿತರಣೆಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ : ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

ramalinga

ಬೆಳಗಾವಿ, ಜ.18- ಕೇಂದ್ರ ಸರ್ಕಾರ ಬರ ಪರಿಹಾರ ವಿತರಣೆಯಲ್ಲಿ ರಾಜಕೀಯ ಮಾಡುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಬೆಳಗಾವಿ ವಿಭಾಗದ ಕೆಎಸ್‍ಆರ್‍ಟಿಸಿ ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣೆ ಇರುವ ರಾಜ್ಯಗಳಿಗೆ ಕೇಳಿದಷ್ಟು ಹಣವನ್ನು ನೀಡುತ್ತದೆ. ಆದರೆ, ಕಾಂಗ್ರೆಸ್ ಆಡಳಿತವಿರುವ ರಾಜ್ಯಗಳಿಗೆ ಕಡಿಮೆ ಹಣ ನೀಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ಬಿಜೆಪಿ ದುರಾಡಳಿತ ನಡೆಸಿದ್ದರಿಂದ ಕಳೆದ ಚುನಾವಣೆಯಲ್ಲಿ ಕೇವಲ 40 ಸೀಟು ಬಂತು. ಈಗ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿರುವ ಅವರು ಈಗಲೇ ಕಚ್ಚಾಟ ಶುರು ಮಾಡಿಕೊಂಡಿದ್ದಾರೆ.
ಮುಂದೆ ಅಷ್ಟು ಸ್ಥಾನಗಳೂ ಕೂಡ ಬರುವುದಿಲ್ಲ ಎಂದು ಹೇಳಿದರು.

ಸರ್ಕಾರದ ಸಚಿವ ಸಂಪುಟದಲ್ಲಿರುವ ಎಲ್ಲ ಸಚಿವರೂ ಸಮರ್ಥರೇ. ಅಸಮರ್ಥರು ಯಾರೂ ಸಂಪುಟದಲ್ಲಿಲ್ಲ. ಸಮರ್ಥರಾಗಿ ರುವುದರಿಂದಲೇ ಎಲ್ಲರೂ ಸಂಪುಟದಲ್ಲಿದ್ದಾರೆ ಎಂದು ಹೇಳಿದರು. ಬೆಳಗಾವಿ ವಿಭಾಗದ ಕೆಎಸ್‍ಆರ್‍ಟಿಸಿ ಕಚೇರಿ ಚಿಕ್ಕೋಡಿ ವಿಭಾಗದ ಅಧಿಕಾರಿಗಳು ಸಭೆ ನಡೆಸಿ ಜಿಲ್ಲೆಯ 10 ತಾಲೂಕಿನಲ್ಲಿ ಕೈಗೊಳ್ಳಲಾದ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿದರು. ಶಾಸಕ ಗಣೇಶ್ ಹುಕ್ಕೇರಿ, ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin