ಬಲೂಚಿಸ್ತಾನ ವಿಷಯದಲ್ಲಿ ಭಾರತ ಹಸ್ತಕ್ಷೇಪ : ಪಾಕ್ ಆರೋಪ

ಈ ಸುದ್ದಿಯನ್ನು ಶೇರ್ ಮಾಡಿ

Pak-modi

ಇಸ್ಲಾಮಾಬಾದ್,ಆ.17- ಬಲೂಚಿಸ್ತಾನ ವಿಷಯದಲ್ಲಿ ಭಾರತ ಹಸ್ತಕ್ಷೇಪ ಮಾಡುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಈ ಪ್ರಾಂತ್ಯದಲ್ಲಿ ಭಯೋತ್ಪಾದನೆಗೆ ನವದೆಹಲಿ ಉತ್ತೇಜನ ನೀಡುತ್ತಿದೆ ಎಂದು ಟೀಕಿಸಿದೆ. ಭಾರತದ 70ನೇ ಸ್ವಾತಂತ್ರ್ಯೋತ್ಸವದ ಭಾಷಣದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬಲೂಚಿಸ್ತಾನದ ವಿಷಯವನ್ನು ಪ್ರಸ್ತಾಪ ಮಾಡಿರುವುದು, ಈ ಪ್ರಾಂತ್ಯದಲ್ಲಿ ಅದು ಹಸ್ತಕ್ಷೇಪ ಮಾಡುತ್ತಿರುವುದನ್ನು ರುಜುವಾತುಪಡಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಕುರಿತ ಪಾಕಿಸ್ತಾನ ಪ್ರಧಾನಮಂತ್ರಿಯವರ ಸಲಹೆಗಾರ ಸರ್ತಾಜ್ ಅಜೀಜ್ ಪ್ರತ್ಯಾರೋಪ ಮಾಡಿದ್ದಾರೆ.   ಬಲೂಚಿಸ್ತಾನದ ಜನರಿಗೆ ಪ್ರಚೋದನಕಾರಿ ಭಾಷಣದ ಮೂಲಕ ಕುಮ್ಮಕ್ಕು ನೀಡಿರುವ ಮೋದಿ, ಆ ಮೂಲಕ ಈ ಪ್ರಾಂತ್ಯದಲ್ಲಿ ಭಯೋತ್ಪಾದನೆಗೆ ಉತ್ತೇಜನ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಕಾಶ್ಮೀರದೊಂದಿಗೆ ಬಲೂಚಿಸ್ತಾನ ದಲ್ಲಿನ ಪರಿಸ್ಥಿತಿಯನ್ನು ಹೋಲಿಕೆ ಮಾಡುವುದು ಸರಿಯಲ್ಲ. ಕಾಶ್ಮೀರ ದಲ್ಲಿ ಕಳೆದ ಐದು ವಾರಗಳಿಂದ ತಲೆದೋರಿರುವ ಭೀಕರ ದುರಂತ ದಿಂದ ವಿಶ್ವದ ಗಮನವನ್ನು ಬೇರೆಡೆ ಸೆಳೆಯಲು ಮೋದಿ ಯತ್ನಿಸುತ್ತಿದ್ದಾರೆ ಎಂದು ಅಜೀಜ್ ಟೀಕಿಸಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin