ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ, ಮೂವರ ದುರ್ಮರಣ

ಈ ಸುದ್ದಿಯನ್ನು ಶೇರ್ ಮಾಡಿ

Accident--02

ಬೀದರ್, ಮೇ 13- ಓವರ್ ಟೇಕ್ ಮಾಡಲು ಹೋದ ಸಂದರ್ಭದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ. ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಕಾರಿಗೆ ಓವರ್‍ಟೇಕ್ ಮಾಡಲು ಹೋದ ಕಂಟೈನರ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ರಾಜೇಂದ್ರ (52), ಶ್ರೀಧರ್ (32), ಸಂತೋಷ್(40) ಮೂವರು ಸ್ಥಳದಲ್ಲೇ ಅಸುನೀಗಿದ್ದು, ಗಾಯಗೊಂಡ ಇಬ್ಬರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಳಗ್ಗೆ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿಯಲ್ಲಿ ತೆರಳುತ್ತಿದ್ದ ಕಾರಿಗೆ ಕಂಟೈನರ್ ಓವರ್‍ಟೇಕ್ ಮಾಡುವ ಭರದಲ್ಲಿ ಡಿಕ್ಕಿ ಹೊಡೆದಾಗ ತೀವ್ರವಾಗಿ ಗಾಯಗೊಂಡು ಮೂವರು ಮೃತಪಟ್ಟಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದ್ದರಿಂದ ಕೆಲಕಾಲ ಸಂಚಾರದಟ್ಟಣೆಯೂ ಉಂಟಾಗಿತ್ತು.

Facebook Comments

Sri Raghav

Admin