ಬಸ್ಸಿಗಾಗಿ ಕಾಯುತ್ತಿದ್ದವರ ಮೇಲೆ ಹರಿದ ಟಂಟಂ : 2ಸಾವು ಮತ್ತೊಬ್ಬ ಗಂಭೀರ

ಈ ಸುದ್ದಿಯನ್ನು ಶೇರ್ ಮಾಡಿ

ರಾಯಬಾಗ,ಫೆ.9- ಬಸ್‍ಗಾಗಿ ಕಾಯುತ್ತಿದ್ದ ಮೂವರ ಮೇಲೆ ಟಂಟಂ ವಾಹನ ಹರಿದು ಸ್ಥಳದಲ್ಲಿ ಇಬ್ಬರು ಸಾವನ್ನಪ್ಪಿ, ಒಬ್ಬ ವ್ಯಕ್ತಿಗೆ ಗಂಭೀರ ಗಾಯವಾಗಿರುವ ಘಟನೆ ಇಂದು ಬೆಳಗ್ಗೆ ತಾಲೂಕಿನ ಕಳ್ಳಿಸ್ಟಾಪ ಗ್ರಾಮದಲ್ಲಿ ಸಂಭವಿಸಿದೆ.ಮಾರುತಿ ಬಾಬು ಅವಳೆ(55), ಸಿದ್ದಪ್ಪ ರಂಗಣ್ಣವರ(55), ಮೃತಪಟ್ಟ ವ್ಯಕ್ತಿಗಳಾಗಿದ್ದು, ರಾಜು ಶಿಂಗೆ(45) ಗಾಯಗೊಂಡವರಾಗಿದ್ದಾರೆ.
ಊರಿಗೆ ಹೋಗಲು ಬಸ್‍ಗಾಗಿ ಕಾಯುತ್ತಿದ್ದಾಗ ಟಂಟಂ ವಾಹನ ಬಂದು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಪಟ್ಟಣದ ಸರಕಾರಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಟಂಟಂ ವಾಹನ ಚಾಲಕನ್ನು ಬಂಧಿಸಲಾಗಿದ್ದು, ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

 

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin