ಬಸ್-ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ : ಇಬ್ಬರ ಸಾವು
ಈ ಸುದ್ದಿಯನ್ನು ಶೇರ್ ಮಾಡಿ
ಮಂಗಳೂರು, ಆ.30- ಬಸ್ ಮತ್ತು ಟೆಂಪೋ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಇಂದು ಬೆಳಗ್ಗೆ ಪುತ್ತೂರು ತಾಲ್ಲೂಕಿನ ನೀರಕಟ್ಟೆ ಬಳಿ ಸಂಭವಿಸಿದೆ. ಸುಗಮ ಟ್ರಾವೆಲ್ಸ್ನ ಖಾಸಗಿ ಬಸ್ ತಿರುವಿನಲ್ಲಿ ವೇಗವಾಗಿ ಬಂದು ಎದುರಿಗೆ ಬರುತ್ತಿದ್ದ ಟೆಂಪೋ ಗೆ ಗುದ್ದಿತು. ಇದರಿಂದಾಗಿ ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆಯಲ್ಲಿ ಮತ್ತೊಬ್ಬನಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿದೆ. ಪುತ್ತೂರು ಸಂಚಾರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ವಾಹನವನ್ನು ತೆರವುಗೊಳಿಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
► Follow us on – Facebook / Twitter / Google+
Facebook Comments