ಬಸ್ ಪ್ರಯಾಣಿಕರ ಮೊಬೈಲ್ ಕಳ್ಳತನ ಮಾಡುತ್ತಿದ್ದ  ಮೂವರ ಬಂಧನ 

ಈ ಸುದ್ದಿಯನ್ನು ಶೇರ್ ಮಾಡಿ

mobile
ಬೆಂಗಳೂರು, ಫೆ.8- ಸಹ ಪ್ರಯಾಣಿಕರ ಸೋಗಿನಲ್ಲಿ ಬಸ್‍ನಲ್ಲಿ ಸಂಚರಿಸಿ ಪ್ರಯಾಣಿಕರ ಮೊಬೈಲ್ ಫೋನ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ್‍ಜಿಲ್ಲಾ ಕಳ್ಳರನ್ನು ಹಾಗೂ ಇವರಿಂದ ಮಾಲು ಸ್ವೀಕರಿಸುತ್ತಿದ್ದ ಮತ್ತೊಬ್ಬನನ್ನು ಕೆಂಪೇಗೌಡ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೂಲತಃ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಶಾರುಕ್ ಖಾನ್ (24), ಬೆಂಗಳೂರು ಗ್ರಾಮಾಂತರ ಕುಂಬಳಗೋಡಿನ ಮೋಸಿನ್ (24) ಮತ್ತು ಮಾಲು ಪಡೆಯುತ್ತಿದ್ದ ಮನ್ಸೂರ್ (30) ಬಂಧಿತ ಆರೋಪಿಗಳು.

ಆರೋಪಿಗಳಿಂದ 1 ಲಕ್ಷ ರೂ. ಮೌಲ್ಯದ ವಿವಿಧ ಕಂಪೆನಿಯ ಮೊಬೈಲ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಕ್ಕೆ ಸಂಬಂಸಿದಂತೆ ಶೌಕತ್ ಅಲಿ ಮತ್ತು ಅಫ್ರೋಜ್ ಎಂಬುವರು ತಲೆಮರೆಸಿಕೊಂಡಿದ್ದಾರೆ.   ಆರೋಪಿಗಳು ಬೆಂಗಳೂರು ನಗರ ಮತ್ತು ಭದ್ರಾವತಿಯಲ್ಲಿ ಬಸ್‍ನಲ್ಲಿ ಸಂಚರಿಸುವ ಪ್ರಯಾಣಿಕರೊಂದಿಗೆ ಸಹ ಪ್ರಯಾಣಿಕರ ಸೋಗಿನಲ್ಲಿ ಪ್ರಯಾಣಿಸಿ ಪ್ರಯಾಣಿಕರ ಜೇಬಿನಲ್ಲಿ ಹಾಗೂ ಬಸ್ ನಿಲ್ದಾಣ ಮುಂತಾದ ಜನನಿಬಿಡ ಪ್ರದೇಶಗಳ ನೂಕು-ನುಗ್ಗಲಿನಲ್ಲಿ ಮೊಬೈಲ್ ಫೋನ್‍ಗಳನ್ನು ಕಳವು ಮಾಡುತ್ತಿದ್ದರು. ಕಳವು ಮಾಡಿದ ಮೊಬೈಲ್‍ಗಳನ್ನು  ಮನ್ಸೂರ್ ಎಂಬಾತನಿಗೆ ಮಾರಾಟ ಮಾಡುತ್ತಿದ್ದುದಾಗಿ ಆರೋಪಿಗಳು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾರೆ.

ದಕ್ಷಿಣ ವಿಭಾಗದ ಉಪ ಪೊಲೀಸ್ ಕಮಿಷನರ್ ಡಾ.ಶರಣಪ್ಪ ಮಾರ್ಗದರ್ಶನದಲ್ಲಿ ಸಹಾಯಕ ಪೊಲೀಸ್ ಕಮಿಷನರ್ ಮಹಾಂತರೆಡ್ಡಿ, ಕೆಂಪೇಗೌಡ ನಗರ ಠಾಣೆ ಇನ್ಸ್‍ಪೆಕ್ಟರ್ ವಿಶ್ವಾಸ್ ಅವರನ್ನೊಳಗೊಂಡ ಸಿಬ್ಬಂದಿಗಳ ತಂಡ ಆರೋಪಿಗಳನ್ನು ಬಂಧಿಸಿ ಮಾಲು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin