ಬಹಿರ್ದೆಸೆಗೆ ತೆರಳಿದ್ದ ಬಾಲಕಿಯನ್ನು ರೇಪ್ ಮಾಡಿದ್ದ ಕಾಮುಕನಿಗೆ 9 ವರ್ಷ ಜೈಲು, 50,000 ದಂಡ

ಈ ಸುದ್ದಿಯನ್ನು ಶೇರ್ ಮಾಡಿ

JAIL--TUMAKURU

ಮೈಸೂರು, ಏ.21- ಬಹಿರ್ದೆಸೆಗೆ ತೆರಳಿದ್ದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿಗೆ ಇಲ್ಲಿನ ನ್ಯಾಯಾಲಯ 9 ವರ್ಷ ಜೈಲುಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಆದೇಶ ಹೊರಡಿಸಿದೆ. ಮಹದೇವಸ್ವಾಮಿ ಶಿಕ್ಷೆಗೆ ಒಳಗಾದ ಅತ್ಯಾಚಾರಿ. ಕಳೆದ 2015ರಲ್ಲಿ ಬಾಲಕಿಯೊಬ್ಬಳು ರಾತ್ರಿ ವೇಳೆ ಬಹಿರ್ದೆಸೆಗೆ ತೆರಳುತ್ತಿದ್ದ ಸಮಯದಲ್ಲಿ ಬೈಕ್‍ನಲ್ಲಿ ಬಂದ ಮಹದೇವಸ್ವಾಮಿ ಹಾಗೂ ಆತನ ಸ್ನೇಹಿತ ನಿಂಗಣ್ಣಸ್ವಾಮಿ ಆಕೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದ.



ಈ ಬಗ್ಗೆ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಪ್ರಕರಣ ಕುರಿತು ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜೆಎಂಎಫ್‍ಸಿ ನ್ಯಾಯಾಲಯ ಆರೋಪಿ ಮಹದೇವಸ್ವಾಮಿ ಅತ್ಯಾಚಾರವೆಸಗಿರುವುದು ಸ್ಪಷ್ಟವಾಗಿದೆ. ಈ ಹಿನ್ನೆಲೆಯಲ್ಲಿ ಆತನಿಗೆ 9 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಆದೇಶ ಹೊರಡಿಸಿದೆ.   ಈತನಿಗೆ ಸಹಕರಿಸಿದ ನಿಂಗಣ್ಣಸ್ವಾಮಿಗೆ 2 ವರ್ಷ ಸಾದಾ ಶಿಕ್ಷೆ ವಿಧಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin