ಬಾಂಬ್ ಮತ್ತು ಗುಂಡಿನ ದಾಳಿ ನಡೆಸಿ ಟಿಎಂಸಿ ನಾಯಕನ ಹತ್ಯೆ

ಈ ಸುದ್ದಿಯನ್ನು ಶೇರ್ ಮಾಡಿ

TMC--01

ಬಹ್ರಾಮ್‍ಪುರ್, ಮೇ 14- ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ದುಷ್ಕರ್ಮಿಗಳ ಗುಂಪೊಂದು ಬಾಂಬ್ ಮತ್ತು ಗುಂಡಿನ ದಾಳಿ ನಡೆಸಿ ತೃಣಮೂಲ ಕಾಂಗ್ರೆಸ್ ನಾಯಕ ಅಸಾದುಲ್ ಶೇಖ್ ಅವರನ್ನು ಹತ್ಯೆ ಮಾಡಿದ್ದಾರೆ.   ಬಹ್ರಾಮ್‍ಪುರ್ ಪೊಲೀಸ್ ಠಾಣೆ ವ್ಯಾಪ್ತಿಯ ಬಾಖುರಿ ಎಂಬಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಕಾಂಗ್ರೆಸ್ ನಾಯಕ ಮತ್ತು ಮುರ್ಷಿದಾಬಾದ್ ಜಿಲ್ಲಾ ಪರಿಷತ್ ಮಾಜಿ ಅಧ್ಯಕ್ಷ ಶಿಲಾದಿತ್ಯ ಹಾಲ್ದರ್ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಧಮ್‍ಕೋಲ್ ನಗರಸಭೆಗೆ ಇಂದು ಚುನಾವಣೆ ನಡೆದಿದ್ದು, ರಾಜಕೀಯ ದ್ವೇಷ ಕೊಲೆ ಎಂದು ಶಂಕಿಸಲಾಗಿದೆ.ಮತಗಟ್ಟೆ ಮೇಲೆ ಬಾಂಬ್ ದಾಳಿ : ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳು ಮತಗಟ್ಟೆ ಮೇಲೆ ಬಾಂಬ್ ಎಸೆದು ಪರಾರಿಯಾಗಿರುವ ಘಟನೆ ಪುಜಲಿಯಲ್ಲಿ ನಡೆದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

 

Facebook Comments

Sri Raghav

Admin