ಬಾಗಲಕೋಟೆ : ಮಳೆ ನೀರಲ್ಲಿ ಕೊಚ್ಚಿ ಹೋದ ಕಾರು, ನಾಲ್ವರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Bagalkot--01

ಬಾಗಲಕೋಟೆ, ಜೂ.7- ಭಾರೀ ಮಳೆಯಿಂದ ಉಕ್ಕಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಕಾರೊಂದು ಹಳ್ಳವೊಂದರಲ್ಲಿ ಕೊಚ್ಚಿ ಕೊಂಡು ಹೋಗಿ ಅದರಲ್ಲಿದ್ದ ನಾಲ್ವರು ಸಾವನ್ನಪ್ಪಿದರೆ ಒಬ್ಬರು ಈಜಿ ದಡ ಸೇರಿ ಜೀವ ಉಳಿಸಿಕೊಂಡಿರುವ ದುರ್ಘಟನೆ ಜಿಲ್ಲೆಯ ಬಾದಾಮಿ ತಾಲ್ಲೂಕು ಅನ್ವಾಳ ಬಳಿ ನಡೆದಿದೆ. ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ವರುಣನ ಆರ್ಭಟ ಹೆಚ್ಚಾಗಿದ್ದು,   ನದಿ, ಹಳ್ಳ-ಕೊಳ್ಳಗಳಲ್ಲಿ ನೀರು ರಭಸವಾಗಿ ಹರಿಯುತ್ತಿದೆ. ಕಳೆದ ರಾತ್ರಿ ಅನ್ವಾಳ -ಇಂಡಿಗೇರಿ ಮಾರ್ಗದ ರಸ್ತೆಯಲ್ಲಿ ಹೋಗುತ್ತಿದ್ದ ಕಾರೊಂದು ಹಳ್ಳಕ್ಕೆ ಉರುಳಿ ಬಿದ್ದು ನೀರಿನಲ್ಲಿ ಕೊಚ್ಚಿಕೊಂಡು ಹೋಗಿದೆ.ಘಟನೆಯಲ್ಲಿ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲ್ಲೂಕಿನ ಕರಡಿಗುಡ್ಡ ಹಾಗೂ ಇಂಡಿಗೇರಿ ಗ್ರಾಮದವರಾದ ಯಮನಪ್ಪ, ಬಸಪ್ಪ ಹಡಪದ (45) ಕರಡಿ ಗುಡ್ಡ ಗ್ರಾಮದ ಅಶೋಕ ಶಿವರುದ್ರಪ್ಪ ಸಾತಪ್ಪನವರ (40), ರುದ್ರಪ್ಪ ವೀರಭದ್ರಪ್ಪ ಗುರಪ್ಪನವರ್ (55) ಹಾಗೂ ಒಳಬಸಪ್ಪ ಶಿರಗುಪ್ಪಿ (55) ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು, ಬಸವಲಿಂಗಪ್ಪ ಎಂಬುವರು ಸಾಹಸ ಮಾಡಿ ಹೇಗೋ ನೀರಿನಲ್ಲಿ ಈಜಿ ದಡ ಸೇರಿ ಜೀವ ಉಳಿಸಿಕೊಂಡಿದ್ದಾರೆ.  ತಕ್ಷಣ ಘಟನೆ ಕುರಿತಂತೆ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ನಂತರ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ತುರ್ತು ಕಾರ್ಯಾಚರಣೆ ನಡೆಸಿದ ನಂತರ ನಾಲ್ವರ ಮೃತದೇಹ ಪತ್ತೆಯಾಗಿದೆ.


ಕಾರು ನೀರಿನಲ್ಲೇ ಕೊಚ್ಚಿಕೊಂಡು ಹೋಗಿದ್ದು, ಎಲ್ಲಿ ಸಿಕ್ಕಿ ಹಾಕಿಕೊಂಡಿದೆ ಎಂಬುದು ಮಧ್ಯಾಹ್ನದವರೆಗೂ ಗೊತ್ತಾಗಲೇ ಇಲ್ಲ. ಘಟನಾ ಸ್ಥಳಕ್ಕೆ ತಹಸೀಲ್ದಾರ್ ಸೇರಿದಂತೆ ಹಿರಿಯ ಅ„ಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಜಿಲ್ಲಾಡಳಿತ ನದಿ ಪಾತ್ರದಲ್ಲಿರುವ ಜನರಿಗೆ ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ಸಂದೇಶ ರವಾನಿಸಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS

Facebook Comments

Sri Raghav

Admin