ಬಾರಾಮುಲ್ಲಾದಲ್ಲಿ ಇಬ್ಬರು ಜೈಷ್ ಉಗ್ರರ ಸೆರೆ, ಭಾರೀ ಪ್ರಮಾಣದ ಶಸ್ತ್ರಾಸ್ತ್ರ ವಶ
ಬಾರಾಮುಲ್ಲಾ, ಅ.28– ಉಗ್ರರ ಬೇಟೆ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಜೈಷ್-ಎ-ಮಹಮದ್ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಬಂಧಿಸಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿವೆ. 46ನೇ ರಾಷ್ಟ್ರೀಯ ರೈಫಲ್ಸ್ ಮತ್ತು ವಿಶೇಷ ಕಾರ್ಯಾಚರಣೆ ಸಮೂಹ ಬಾರಾಮುಲ್ಲಾದ ಅರಣ್ಯ ಪ್ರದೇಶದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ ಇಬ್ಬರು ಜೈಷ್ ಉಗ್ರರನ್ನು ಸೆರೆಹಿಡಿದಿದೆ ಎಂದು ಹಿರಿಯ ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಂಧಿತ ಭಯೋತ್ಪಾದಕರಿಂತ ಒಂದು ಎಕೆ-45 ಬಂದೂಕ, ಒಂದು ಪಿಸ್ತೂಲ್ ಮತ್ತು ಮದ್ದುಗುಂಡುಗಳು, ಅಂಡರ್ ಬ್ಯಾರೆಲ್ ಗ್ರೆನೇಡ್ ಲಾಂಚರ್ ಮತ್ತು ಯುಜಿಬಿಎಲ್ ಗ್ರೆನೇಡ್ಗಳನ್ನು ಜಪ್ತಿ ಮಾಡಲಾಗಿದೆ.
ಕಾಶ್ಮೀರ ಕಣಿವೆಯಲ್ಲಿ ಕಳೆದ ಒಂದು ವಾರದಿಂದ ಕಾರ್ಯಾಚರಣೆಯನ್ನು ತೀವ್ರಗೊಳಿಸಿರುವ ಭದ್ರತಾ ಪಡೆಗಳು ಉಗ್ರರ ಅಡಗುದಾಣಗಳನ್ನು ಪತ್ತೆ ಮಾಡಿ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ.
ಮಸೂದ್ ಅಜರ್ ಭಯೋತ್ಪಾದಕ :
ಇದೇ ವೇಳೆ, ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ಹೇಳಿಕೆ ನೀಡಿದ ಮಾಜಿ ಅಧ್ಯಕ್ಷ ಜನರಲ್ ಪರ್ವೇಜ್ ಮುಷರ್ರಫ್, ಜೈಷ್-ಎ-ಮಹಮದ್ ಮುಖ್ಯಸ್ಥ ಮೌಲಾನಾ ಮಸೂದ್ ಅಜರ್ ಓರ್ವ ಭಯೋತ್ಪಾದಕ ಎಂದು ಬಣ್ಣಿಸಿದ್ದಾರೆ. ಅಲ್ಲದೇ ತನ್ನ ದೇಶದಲ್ಲೇ ಈತ ಬಾಂಬ್ ದಾಳಿಗಳನ್ನು ನಡೆಸಿದ್ದಾರೆ ಎಂದು ಕಟುವಾಗಿ ಟೀಕಿಸಿದ್ಧಾರೆ.
► Follow us on – Facebook / Twitter / Google+