ಬಾಲಕಿಯನ್ನು ಕೊಲೆ ಮಾಡಿದ್ದ ಯುವಕನನ್ನು 24 ಗಂಟೆಯೊಳಗೆ ಬಂಧಿಸಿಧ ಪೊಲೀಸರು

ಈ ಸುದ್ದಿಯನ್ನು ಶೇರ್ ಮಾಡಿ

ಹಾವೇರಿ, ಮೇ 7- ಬಾಲಕಿಯೊಬ್ಬಳನ್ನು ಕೊಲೆ ಮಾಡಿ ಪರಾರಿಯಾಗಿದ್ದ ಯುವಕನನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಹುಬ್ಬಳ್ಳಿ ತಾಲ್ಲೂಕು ಕುರಡಿಕೇರಿ ಗ್ರಾಮದ ನಿವಾಸಿ ಬಸಪ್ಪ ಶೆಟ್ಟಪ್ಪ ವಡ್ಡರ್ (21) ಬಂಧಿತ ಆರೋಪಿ.

ನಿನ್ನೆ ರಾತ್ರಿ ಹಾವೇರಿ ಜಿಲ್ಲೆಯ ಶಿಗ್ಗಾಂವ ತಾಲ್ಲೂಕು ಕಾರಸಾಪುರದಲ್ಲಿ ಏಳು ವರ್ಷದ ಬಾಲಕಿಯನ್ನು ಬಸಪ್ಪ ಕೊಲೆ ಮಾಡಿ ಪರಾಯಾಗಿದ್ದನು. ಈ ಸಂಬಂಧ ಫೋಷಕರು ಪೊಲೀಸರಿಗೆ ಮಾಹಿತಿ ನೀಡಿ ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿ ಬಸಪ್ಪನನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.  ಈ ಸಂಬಂಧ ಶಿಗ್ಗಾಂವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Facebook Comments