ಬಾಲಕಿಯರ ತಂಡ ರಾಜ್ಯಮಟ್ಟಕ್ಕೆ ಆಯ್ಕೆ
ಚನ್ನಪಟ್ಟಣ, ಸೆ.23- ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ತಾಲ್ಲೂಕಿನ ಬೇವೂರು ಗ್ರಾಮದ ಶ್ರೀ ಸಿದ್ದರಾಮೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಥ್ರೋಬಾಲ್ ಪಂದ್ಯದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಬಾಲಕರ ವಿಭಾಗದ ಥ್ರೋಬಾಲ್ ಪಂದ್ಯದಲ್ಲಿ ಈ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಪಡೆದಿರುತ್ತಾರೆ. ಚಿಂತನ್ಕುಮಾರ್ ಬಿ.ಪಿ ಎಂಬ ವಿದ್ಯಾರ್ಥಿಯು ಭರ್ಜಿ ಎಸೆತದಲ್ಲಿ ಪ್ರಥಮ ಸ್ಥಾನ, ಚಕ್ರ ಎಸೆತದಲ್ಲಿ ಪ್ರಥಮ ಸ್ಥಾನ ಮತ್ತು 800 ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಸಾಗರ್ ಕೆ. ವಿದ್ಯಾರ್ಥಿ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ, ಕಾವ್ಯ ಟಿ.ಕೆ. ವಿದ್ಯಾರ್ಥಿನಿ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಕಾವ್ಯ ಸಿ. 1500 ಮೀ. ಓಟದಲ್ಲಿ ತೃತೀಯ ಸ್ಥಾನ ಮತ್ತು 400 ಮೀ ರಿಲೇಯಲ್ಲಿ ಬಾಲಕರು ದ್ವಿತೀಯ ಸ್ಥಾನ ಪಡೆದಿರುತ್ತಾರೆ.ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಮತ್ತು ಜಿಲ್ಲೆಗೆ ಕೀರ್ತಿ ತಂದ ಎಲ್ಲಾ ವಿದ್ಯಾರ್ಥಿಗಳನ್ನು ಪ್ರಾಂಶುಪಾಲ ಡಿ.ಸಿ.ಸುರೇಶ್, ಕ್ರೀಡಾ ಕಾರ್ಯದರ್ಶಿ ಆರ್.ಪಿ.ಮಂಜುನಾಥ್, ದೈ.ಶಿ.ಶಿಕ್ಷಕ ನಾಗೇಶ್ಗೌಡ, ಆಡಳಿತ ಮಂಡಳಿ ಮತ್ತು ನೌಕರ ವೃಂದ ಅಭಿನಂದಿಸಿದೆ.
► Follow us on – Facebook / Twitter / Google+