ಬಾಲಕಿ ಮೇಲೆ ಅತ್ಯಾಚಾರ ಯತ್ನ : ಯುವಕನಿಗೆ ಧರ್ಮದೇಟು

ಈ ಸುದ್ದಿಯನ್ನು ಶೇರ್ ಮಾಡಿ

rape--case

ಮಾಗಡಿ, ಆ.27- ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸುತ್ತಿದ್ದ ಯುವಕನನ್ನು ಹಿಡಿದು ಗ್ರಾಮಸ್ಥರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿರುವು ಘಟನೆ ಮಾಗಡಿ ಪೊಲೀಸ್ ಠಾಣೆ ವ್ಯಾಪ್ತಿಯ ತೊರೆಪಾಳ್ಯ ಗ್ರಾಮದಲ್ಲಿ ನಡೆದಿದೆ.ತಾಲೂಕಿನ ಕಾಳಾರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊರೆಪಾಳ್ಯದ ರಾಘವೇಂದ್ರ(25) ಅತ್ಯಾಚಾರಕ್ಕೆ ಯತ್ನಿಸಿದಾತ.ಇದೇ ಗ್ರಾಮದ 5 ವರ್ಷದ ಬಾಲಕಿ ರಾಘವೇಂದ್ರ ತಿಂಡಿ ಕೊಡಿಸುತ್ತೇನೆಂದು ಆಟೋದಲ್ಲಿ ಕೂರಿಸಿಕೊಂಡು ಲೈಂಗಿಕ ಕಿರುಕುಳ ನೀಡಲು ಯತ್ನಿಸಿದ್ದು, ಈ ಸಮಯದಲ್ಲಿ ಬಾಲಕಿ ಕಿರುಚಿಕೊಂಡು, ಗಲಾಟೆ ಮಾಡುತ್ತಿದುದ್ದನ್ನು ಗಮನಿಸಿದ ಗ್ರಾಮಸ್ಥರು ಬಾಲಕಿಯನ್ನು ರಕ್ಷಿಸಿ ಕಾಮುಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ್ದಾರೆ.ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

 

► Follow us on –  Facebook / Twitter  / Google+

Facebook Comments

Sri Raghav

Admin