ಬಾಲ್ಯ ವಿವಾಹ ಕುರಿತು ಜಾಗೃತಿ ಅಗತ್ಯ

ಈ ಸುದ್ದಿಯನ್ನು ಶೇರ್ ಮಾಡಿ

child--marrigeಪಾಂಡವಪುರ, ಅ.21- ಬಾಲ್ಯ ವಿವಾಹ ಕಾನೂನು ಬಾಹಿರವಾಗಿದ್ದು , ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳಲ್ಲಿ ಬಾಲ್ಯ ವಿವಾಹ ಪದ್ದತಿಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದರು ಶಾಸಕ ಪುಟ್ಟಣ್ಣಯ್ಯ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮದ ವತಿಯಿಂದ ನಡೆದ ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಹಾಗೂ ಬಾಲ್ಯ ವಿವಾಹ(ಕರ್ನಾಟಕ) ನಿಯಮಗಳ 2014ರ ಆಂದೋಲನ ಜಾಥಕ್ಕೆ ಚಾಲನೆ ನೀಡಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಏಡ್ಸ್‍ನಿಂದ ಬಳಲುವರ ಸಂಖ್ಯೆ ಹೆಚ್ಚಾಗುತ್ತಿದೆ. ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಪ್ರತಿ ಸಾರ್ವಜನಿಕ ಸ್ಥಳಗಳಲ್ಲಿ ಏಡ್ಸ್ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಪ್ರತಿಯೊಬ್ಬರು ಕಡ್ಡಾಯವಾಗಿ ರಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಎಷ್ಟೋ ಮಂದಿ ಏಡ್ಸ್ ಇದ್ದರೂ ಸಹ ಅಂಜಿಕೆಯಿಂದ ಯಾರ ಬಳಿಯೂ ಹೇಳಿಕೊಳ್ಳದೆ ಮತ್ತಷ್ಟು ಸಮಸ್ಯೆ ಸೃಷ್ಠಿಸುತ್ತಾರೆ, ಹಾಗಾಗಿ ಈ ಕಾಯಿಲೆಯ ಬಗ್ಗೆ ಜಾಗೃತಿ ಮೂಡಿಸಿಕೊಳ್ಳುವುದು ಒಳ್ಳೆಯದು ಎಂದು ತಿಳಿಸಿದರು.ಜಿಪಂ ಸದಸ್ಯರಾದ ಎಚ್.ತ್ಯಾಗರಾಜು, ತಿಮ್ಮೇಗೌಡ, ಶಾಂತಲ, ಅನುಸೂಯ, ಮಾಜಿ ಸದಸ್ಯೆ ಜಿ.ಕೆ.ಕೋಮಲ, ತಾಪಂ ಅಧ್ಯಕ್ಷೆ ರಾಧಮ್ಮ, ಉಪಾಧ್ಯಕ್ಷೆ ಲಕ್ಷ್ಮಮ್ಮ, ಸದಸ್ಯರಾದ ಶೋಭಾ, ಗಾಯಿತ್ರಿ, ಸಿಡಿಪಿಓ ಅನ್ನದಾನಿ, ಬಿಇಓ ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

 

► Follow us on –  Facebook / Twitter  / Google+

Facebook Comments

Sri Raghav

Admin