‘ಬಾಲ ಬಿಚ್ಚಿದರೆ ತೋಳು ಮಡಚುತ್ತೇವೆ’ : ಪಾಕ್‍ಗೆ ಜನರಲ್ ರಾವತ್ ಖಡಕ್ ವಾರ್ನಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Bipin-Rawt

ನವದೆಹಲಿ, ಜ.1- ದೇಶದ ಗಡಿಯಲ್ಲಿ ಶಾಂತಿ ಮತ್ತು ಪ್ರಶಾಂತ ವಾತಾವರಣ ನಿರ್ಮಿಸಲು ನಮ್ಮ ಸೇನಾಪಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಆದರೆ, ಅಗತ್ಯವಿದ್ದರೆ ತೋಳು ಮಡಚಲು ನಾವು ಹಿಂಜರಿಯುವುದಿಲ್ಲ ಎಂದು ನೂತನ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪಾಕಿಸ್ತಾನಕ್ಕೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ತಂಟೆಕೋರರು ಬಾಲ ಬಿಚ್ಚಿದರೆ ನಾವು ತೋಳು ಮಡಚಿ ಸೂಕ್ತ ಪ್ರತ್ಯುತ್ತರ ನೀಡಲು ಸಿದ್ಧರಿದ್ದೇವೆ ಎಂದು ತಿಳಿಸಿದರು.

ಈಸ್ಟ್ರನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪ್ರವೀಣ್ ಭಕ್ಷಿ ಮತ್ತು ಸದರನ್ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪಿ.ಎಂ.ಹರೀಜ್ ಸೇನೆಯ ಸೇವೆಯಲ್ಲಿ ಮುಂದುವರಿಯಲಿದ್ದಾರೆ ಎಂದರು. ಸೇನೆಯ ಎಲ್ಲ ಘಟಕಗಳು, ಸೇವೆಗಳು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲಿವೆ. ವೈರಿಗಳಿಂದ ಎದುರಾಗಬಹುದಾದ ಯಾವುದೇ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ನಮ್ಮ ಸೇನಾಪಡೆಗಳು ಕಂಕಣಬದ್ಧವಾಗಿವೆ ಎಂದು ಹೇಳಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin