ಬಾವಿಯಲ್ಲಿ ಬಿದ್ದ ವೃದ್ದೆ ರಕ್ಷಣೆ

ಈ ಸುದ್ದಿಯನ್ನು ಶೇರ್ ಮಾಡಿ

ಕೆ.ಆರ್.ಪೇಟೆ,ಫೆ.5-ಬಾವಿಯಿಂದ ನೀರು ಸೇದುವಾಗ ಆಕಸ್ಮಿಕವಾಗಿ ವೃದ್ದೆಯೊಬ್ಬರು ಕಾಲುಜಾರಿ ಬಿದ್ದಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಂದು ಬೆಳಗ್ಗೆ ರಥಬೀದಿಯ ನಿವಾಸಿ ಯಶೋಧಮ್ಮ(70) ತಮ್ಮ ಮನೆಯ ಹಿಂಭಾಗದಲ್ಲಿದ್ದ 50 ಅಡಿ ಆಳದ ಬಾವಿಯಿಂದ ನೀರು ಸೇದುತ್ತಿದ್ದಾಗ ಕಾಲುಜಾರಿ ಬಾವಿಯೊಳಗೆ ಬಿದ್ದಿದ್ದಾರೆ. ತಕ್ಷಣವೇ ಸೊಸೆ ನೋಡಿ ಅಕ್ಕಪಕ್ಕದ ಮನೆಯವರಿಗೆ ತಿಳಿಸಿದ್ದಾಳೆ. ಸ್ಥಳೀಯರು ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದ್ದು, ಅಗ್ನಿಶಾಮಕ ದಳದವರು ಒಂದು ಗಂಟೆ ಕಾಲ ಕಾರ್ಯಾಚರಣೆ ನಡೆಸಿ ವೃದ್ದೆಯನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ವೃದ್ದೆಗೆ ಸಣ್ಣಪುಟ್ಟ ಗಾಯಗಳಾಗಿದ್ದು , ಕೆ.ಆರ್.ಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin