ಬಿಎಸ್‍ವೈ ಅಕ್ರಮ ಡಿನೋಟಿಫಿಕೇಷನ್ ಪ್ರಕರಣ : ನ.14ಕ್ಕೆ ವಿಚಾರಣೆ ಮುಂದೂಡಿಕೆ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa--01

ನವದೆಹಲಿ, ಸೆ.20-ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಅಕ್ರಮ ಡಿನೋಟಿಫಿಕೇಷನ್ ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ನ.14ಕ್ಕೆ ಮುಂದೂಡಿದೆ.  ಕರ್ನಾಟಕ ಹೈಕೋರ್ಟ್ ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ 15 ಡಿನೋಟಿಫಿಕೇಷನ್ ಪ್ರಕರಣವನ್ನು ರದ್ದು ಮಾಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯಸರ್ಕಾರ ಸುಪ್ರೀಂಕೋರ್ಟ್‍ಗೆ ಮೇಲ್ಮನವಿ ಸಲ್ಲಿಸಿತ್ತು.  ಬುಧವಾರ ಮುಂದುವರೆದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂಕೋರ್ಟ್ ಹೆಚ್ಚಿನ ದಾಖಲೆಗಳನ್ನು ನೀಡುವಂತೆ ಬಿಎಸ್‍ವೈ ಪರ ವಕೀಲ ರೋಹನ್ ಮುಕುಟಗಿ, ನ್ಯಾಯಾಧೀಶರಾದ ಎನ್.ಎ.ಸಿಕ್ರಿ ನೇತೃತ್ವದ ದ್ವಿಸದಸ್ಯ ಪೀಠ ಸೂಚಿಸಿತ್ತು.

ನವೆಂಬರ್ 14 ರಿಂದ ಅಂತಿಮ ವಿಚಾರಣೆ ನಡೆಯುವ ಸಾಧ್ಯತೆ ಇದ್ದು, ಈ ವೇಳೆಗೆ ಯಡಿಯೂರಪ್ಪ ಪರ ಹೆಚ್ಚುವರಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ವಕೀಲರಿಗೆ ಸೂಚನೆ ಕೊಟ್ಟಿದೆ.

ಏನಿದು ಪ್ರಕರಣ:

ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೇ ಕಾನೂನು ಬಾಹಿರವಾಗಿ ಡಿ ನೋಟಿಫಿಕೇಷನ್ ಮಾಡಿದ್ದಾರೆ ಎಂದು ಸಿಎಜಿ ವರದಿಯಲ್ಲಿ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಾಲಯ ಅವರ ವಿರುದ್ಧ 15 ಎಫ್‍ಐಆರ್ ದಾಖಲಿಸಿತ್ತು. ಹೈಕೋರ್ಟ್ ನ್ಯಾಯಮೂರ್ತಿ ರತ್ನಮಾಲಾ ಅವರಿದ್ದ ಏಕಸದಸ್ಯ ಪೀಠ ಈ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಿತ್ತು. ರಾಜ್ಯಸರ್ಕಾರ ಹೈಕೋರ್ಟ್‍ನ ತೀರ್ಪನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಸುಪ್ರೀಂಕೋರ್ಟ್ ನೀಡುವ ತೀರ್ಪು ಯಡಿಯೂರಪ್ಪನವರ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿದೆ.

Facebook Comments

Sri Raghav

Admin