ಬಿಎಸ್‍ವೈ ವಿರುದ್ಧ ಹೇಳಿಕೆಗೆ ಬಿಜೆಪಿ ಖಂಡನೆ

ಈ ಸುದ್ದಿಯನ್ನು ಶೇರ್ ಮಾಡಿ

6

ಬೆಂಗಳೂರು, ಫೆ.22- ಹೈಕಮಾಂಡ್‍ಗೆ ನೀಡಿರುವ ಕಪ್ಪದ ಬಗ್ಗೆ ಸಾಬೀತು ಪಡಿಸಬೇಕಾದ ಕಾಂಗ್ರೆಸ್ ನಾಯಕರು, ನಕಲಿ ಸಿಡಿ ಸೃಷ್ಟಿಸಿ ಜನರ ಗಮನವನ್ನು ಬೇರೆಡೆ ಸೆಳೆಯಲು ಷಂಡ್ಯಂತರ ರೂಪಿಸಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಚಿ.ನಾ ರಾಮು ಆರೋಪಿಸಿದರು.ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಯಡಿಯೂರಪ್ಪನವರ ವಿರುದ್ಧ ಮಾಡಿರುವ ಆರೋಪವನ್ನು ಖಂಡಿಸಿ ಬಿಜೆಪಿ ಎಸ್ಸಿ ಮೋರ್ಚಾ ವತಿಯಿಂದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಹಮ್ಮಿಕೊಂಡಿದ್ದ ಪ್ರತಿ ಭಟನೆಯ ಸಂದರ್ಭ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದರು.ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರು ಮಾನಸಿಕ ಅಸ್ವಸ್ಥರಾಗಿದ್ದಾರೆ. ಅವರನ್ನು ಮೆಂಟಲ್ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು ಎಂದು ನೀಡಿರುವ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರು ಹಿಂಪಡೆಯ ಬೇಕು ಎಂದು ಅವರು ಆಗ್ರಹಿಸಿದರು.

ದಿನೇಶ್ ಗುಂಡೂರಾವ್ ಅವರು ಇಂತಹ ಹೇಳಿಕೆ ನೀಡುವ ಮೂಲಕ ಬಿಜೆಪಿಯ ಹಿರಿಯ ನಾಯಕ ಬಿಎಸ್ ಯಡಿಯೂರಪ್ಪ ಅವರನ್ನು ಅವಮಾನಿಸಿದ್ದಾರೆ. ಈರೀತಿ ಹೇಳಿಕೆ ನೀಡಿರುವುದು ಸರಿ ಅಲ್ಲ.ದಿನೇಶ್ ಗುಂಡೂರಾವ್ ಅವರು ಯಡಿಯೂರಪ್ಪನವರ ಬಳಿ ಇದೆ ಎಂದು ಹೇಳಲಾದ ಡೈರಿಯನ್ನು ಪತ್ತೆ ಮಾಡಲಿ ಮತ್ತು ಡೈರಿಯಲ್ಲಿ ಇರುವುದನ್ನು ಒಪ್ಪಿಕೊಳ್ಳಲಿ. ಈ ರೀತಿ ಕೀಳುಮಟ್ಟದ ಹೇಳಿಕೆ ನೀಡುವುದನ್ನು ಬಿಡಬೇಕು. ಗುಂಡೂರಾವ್ ಅವರು ಗೌರವಾನ್ವಿತ ಕುಟುಂಬದಿಂದ ಬಂದವರು. ಅವರು ಅದಕ್ಕೆ ತಕ್ಕಂತೆ ನಡೆದುಕೊಳ್ಳಬೇಕು. ನೀವು ಈ ರೀತಿ ಕೀಳುಮಟ್ಟದ ರಾಜಕೀಯ ಮಾಡಿದರೆ ನಾವು ಅದಕ್ಕೆ ತಕ್ಕ ಉತ್ತರ ಕೊಡಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin