ಬಿಜೆಪಿಯವರ ಕಿರುಕುಳದಿಂದ ಬೇಸತ್ತು ಯೋಗೇಶ್‍ಗೌಡ ಪತ್ನಿ ಕಾಂಗ್ರೆಸ್‍ ಸೇರಿದ್ದಾರೆ : ಸಿಎಂ

ಈ ಸುದ್ದಿಯನ್ನು ಶೇರ್ ಮಾಡಿ

Cm-Sid--02

ಕಲಬುರಗಿ, ಡಿ.17-ಬಿಜೆಪಿಯವರ ಕಿರುಕುಳದಿಂದ ಬೇಸತ್ತು ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್‍ಗೌಡ ಅವರ ಪತ್ನಿ ಮಲ್ಲಮ್ಮ ಕಾಂಗ್ರೆಸ್ ಸೇರಿದ್ದಾರೆ. ನಾವು ಅವರನ್ನು ಹೈಜಾಕ್ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯ ಸುರಪುರ ತಾಲೂಕಿನ ಹುಣಸಗಿ ಗ್ರಾಮದಲ್ಲಿಂದು ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧಾರವಾಡ ಜಿಲ್ಲೆ ಹೆಬ್ಬಳ್ಳಿ ಜಿ.ಪಂ. ಸದಸ್ಯ ಯೋಗೇಶ್‍ಗೌಡ ಅವರ ಪತ್ನಿ ಮಲ್ಲಮ್ಮನನ್ನು ಕಾಂಗ್ರೆಸ್ ಹೈಜಾಕ್ ಮಾಡಿದೆ ಎಂಬ ಆರೋಪ ಶುದ್ಧ ಸುಳ್ಳು.

CM--01

ಬಿಜೆಪಿಯವರ ನಿರಂತರ ಕಿರುಕುಳದಿಂದ ಅವರು ಕಾಂಗ್ರೆಸ್ ಸೇರಿದ್ದಾರೆ. ತಮ್ಮನ್ನು ಕಾಂಗ್ರೆಸ್ ಹೈಜಾಕ್ ಮಾಡಿಲ್ಲ ಎಂದು ಸ್ವತಃ ಮಲ್ಲಮ್ಮನವರೇ ತಿಳಿಸಿದ್ದಾರೆ. ಬಿಜೆಪಿಯವರು ವಿನಾಕಾರಣ ಈ ವಿಷಯವನ್ನು ದೊಡ್ಡದಾಗಿ ಮಾಡುತ್ತಿದ್ದಾರೆ ಎಂದು ಹೇಳಿದರು. ಈ ಪ್ರಕರಣ ನ್ಯಾಯಾಲಯದಲ್ಲಿರುವುದರಿಂದ ನಾನು ಹೆಚ್ಚಾಗಿ ಏನನ್ನೂ ಹೇಳುವುದಿಲ್ಲ. ಸಚಿವ ವಿನಯ್‍ಕುಲಕರ್ಣಿ ಅವರ ಹೆಸರನ್ನು ಕೆಡಿಸಲು ಬಿಜೆಪಿ ಏನೆಲ್ಲ ತಂತ್ರ ಮಾಡಿದರು ಎಂಬುದು ಎಲ್ಲರಿಗೂ ಗೊತ್ತಿದೆ. ಅವರ ತಂತ್ರ ಯಾವುದೂ ಫಲಿಸುವುದಿಲ್ಲ ಎಂದು ಅವರು ತಿಳಿಸಿದರು. ಕಾರ್ಯಕರ್ತರ ವಾಹನಗಳಿಗೆ ಪೆಟ್ರೋಲ್: ಇಂದು ನಡೆಯಲಿರುವ ಸಮಾವೇಶಕ್ಕೆ ಆಗಮಿಸುವ ಕಾರ್ಯಕರ್ತರ ಬೈಕ್‍ಗಳಿಗೆ ಶಾಸಕ ರಾಜವೆಂಕಟಪ್ಪ ನಾಯಕ್ ಅವರು 2 ಲೀಟರ್ ಪೆಟ್ರೋಲ್ ಉಚಿತವಾಗಿ ತುಂಬಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Facebook Comments

Sri Raghav

Admin