ಬಿಜೆಪಿಯವರ ಗೂಂಡಾಗಿರಿಯಿಂದ ಬೆಂಗಳೂರು ರಕ್ಷಿಸಬೇಕಾಗಿದೆ : ರಾಮಲಿಂಗಾರೆಡ್ಡಿ

ಈ ಸುದ್ದಿಯನ್ನು ಶೇರ್ ಮಾಡಿ

Ramalingareddy-Session--01

ಬೆಂಗಳೂರು, ಮಾ.1- ಬಿಜೆಪಿಯವರ ಬೆಂಗಳೂರು ರಕ್ಷಿಸಿ ಯಾತ್ರೆಯ ವಿರುದ್ಧ ಕಿಡಿಕಾಡಿರುವ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬಿಜೆಪಿಯವರ ಗೂಂಡಾಗಿರಿಯಿಂದ ಬೆಂಗಳೂರು ರಕ್ಷಿಸಬೇಕಾದ ಅಗತ್ಯವಿದೆ ಎಂದು ತಿರುಗೇಟು ನೀಡಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೇಲ್ಮನೆ ಪ್ರತಿಪಕ್ಷದ ನಾಯಕ ಈಶ್ವರಪ್ಪ ಅವರ ಪಿಎ ವಿನಯ್ ಕಿಡ್ನಾಪ್ ಪ್ರಕರಣದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಪಿಎ ಸಂತೋಷ್ ಭಾಗಿಯಾಗಿರುವುದು ಸುಳ್ಳೆ? ಸಂತೋಷ್ ಗೂಂಡಾ ಅಲ್ಲವೆ? ಬಿಬಿಎಂಪಿ ಸದಸ್ಯರಾಗಿದ್ದ ಗೋವಿಂದೇಗೌಡರ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರು ಬಿಜೆಪಿಯ ಗೂಂಡಾಗಳಲ್ಲವೆ, ಮೂಡಿಗೆರೆಯ ಧನ್ಯಶ್ರೀ ಆತ್ಮಹತ್ಯೆ ಪ್ರಕರಣದಲ್ಲಿ ಭಾಗಿಯಾಗಿರುವವರು ಯಾರು? ಮೊದಲು ಇವರೆಲ್ಲರಿಂದಲೂ ಜನರನ್ನು ರಕ್ಷಿಸಬೇಕಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರು ರಕ್ಷಿಸಿ ಎಂದು ಬಿಜೆಪಿಯವರು ಮಾಡುತ್ತಿರುವ ಯಾತ್ರೆ ಹಾಸ್ಯಸ್ಪದವಾಗಿದೆ ಎಂದು ಟೀಕಿಸಿದ ಅವರು, ಸಾಕಷ್ಟು ಪ್ರಕರಣಗಳು ಇವರು, ಇವರ ಪಕ್ಷದವರ ಮೇಲೆ ಇವೆ, ಮೊದಲು ಅದನ್ನು ಅವರು ತಿಳಿದುಕೊಳ್ಳಲಿ ಎಂದು ತಿರುಗೇಟು ನೀಡಿದರು. ವಿದ್ವತ್ ಮೇಲೆ ನಡೆದ ಹಲ್ಲೆ ಪ್ರಕರಣದಲ್ಲಿ ಶಾಸಕ ಹ್ಯಾರಿಸ್ ಅವರ ಪುತ್ರ ನಲಪಾಡ್ ವಿರುದ್ಧ ನಿಶ್ಪಕ್ಷಪಾತವಾಗಿ ಸರ್ಕಾರ ನಡೆದುಕೊಂಡಿದೆ. ಮೊಹಮದ್ ಹ್ಯಾರಿಸ್ ನಲಪಾಡ್‍ನನ್ನು ಬಂಧಿಸಿ ಕಾನೂನು ಕ್ರಮ ತೆಗೆದುಕೊಂಡಿದ್ದೇವೆ ಎಂದು ಹೇಳಿದರು. ಸುಮಾರು 8ಸಾವಿರ ಕೋಟಿ ರೂ. ಬೆಲೆ ಬಾಳುವ ಬಿಬಿಎಂಪಿ ಆಸ್ತಿಯನ್ನು ಬಿಜೆಪಿಯವರು ಅಡಮಾನವಿಟ್ಟು ಸಾಲ ಪಡೆದುಕೊಂಡಿದ್ದರು. ಆದರೆ, ನಮ್ಮ ಪಕ್ಷದವರು ಅದನ್ನು ಹಿಂದಕ್ಕೆ ಪಡೆದುಕೊಂಡು ಆಸ್ತಿ ಉಳಿಸಿದ್ದಾರೆ. ಇಂತಹ ಹಿನ್ನೆಲೆಯುಳ್ಳವರಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin