ಬಿಜೆಪಿಯಿಂದ ಕಾಂಗ್ರೆಸ್ ಸೇನಾನಿಗಳ ಹೈಜಾಕ್

ಈ ಸುದ್ದಿಯನ್ನು ಶೇರ್ ಮಾಡಿ

Dinesh-Gundu-Roa

ಬೆಂಗಳೂರು, ಆ.9- ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಕ್ವಿಟ್‍ಇಂಡಿಯಾ ಚಳವಳಿಗೆ ವಿರೋಧ ವ್ಯಕ್ತಪಡಿಸಿದ್ದ ಸಂಘ ಪರಿವಾರದ ನಾಯಕರು ಈಗ  ಜನರನ್ನು ಮರುಳು ಮಾಡಲು ಸರ್ದಾರ್‍ವಲ್ಲಭಬಾಯಿ ಪಟೇಲ್, ಚಂದ್ರಶೇಖರ್ ಆಜಾದ್, ಭಗತ್‍ಸಿಂಗ್‍ರಂತಹ ಕಾಂಗ್ರೆಸ್ ಸೇನಾನಿಗಳನ್ನು ಪೂಜಿಸಲಾರಂಭಿಸಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‍ಗುಂಡೂರಾವ್ ವ್ಯಂಗ್ಯವಾಡಿದರು.  ಕೆಪಿಸಿಸಿ ಕಚೇರಿಯಲ್ಲಿಂದು ಕ್ವಿಂಟ್‍ಇಂಡಿಯಾ ಚಳವಳಿ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿ ಅಥವಾ ಸಂಘ ಪರಿವಾರದ ಒಬ್ಬ ನಾಯಕರೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ. ಜತೆಗೆ ಕ್ವಿಟ್‍ಇಂಡಿಯಾ ಚಳವಳಿ ಆರಂಭವಾದಾಗ ಮುಸ್ಲಿಂ ಲೀಗ್ ಮತ್ತು ಸಂಘ ಪರಿವಾರ ವಿರೋಧ ವ್ಯಕ್ತಪಡಿಸಿತ್ತು.ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆ ಕಾಂಗ್ರೆಸ್ ನಾಯಕರನ್ನು ಹೈಜಾಕ್ ಮಾಡಿ ಜನರನ್ನು ಮರುಳು ಮಾಡುವ ಪ್ರಯತ್ನಗಳು ನಡೆಯುತ್ತಿವೆ.

ಇದಕ್ಕೂ ಮೊದಲು ಸ್ವಾತಂತ್ರ್ಯ ಚಳವಳಿಯಲ್ಲಿ ಭಾಗವಹಿಸದಿದ್ದಕ್ಕಾಗಿ ಸಂಘ ಪರಿವಾರ ಮತ್ತು ಬಿಜೆಪಿ ನಾಯಕರು ಸಾರ್ವಜನಿಕರ ಕ್ಷೆಮೆ ಕೇಳಲಿ. ಅನಂತರ ಭಗತ್‍ಸಿಂಗ್, ಚಂದ್ರಶೇಖರ್ ಆಜಾದ್, ಸರ್ದಾರ್ ವಲ್ಲಭಬಾಯಿ ಅವರನ್ನು ಪೂಜಿಸಲಿ ಎಂದು ಸವಾಲು ಹಾಕಿದರು.  ಇತ್ತೀಚೆಗೆ ದಲಿತರು ಮತ್ತು ಅಲ್ಪಸಂಖ್ಯಾತರ ಮೇಲೆ ದೌರ್ಜನ್ಯಗಳು ಹೆಚ್ಚಾಗುತ್ತಿವೆ.  ಇತ್ತೀಚೆಗೆ ವಿಶ್ವವಿದ್ಯಾಲಯಗಳಲ್ಲಿ ಮತ್ತು ವಿದ್ಯಾರ್ಥಿ ಸಂಘಟನೆಗಳಲ್ಲೂ ಇದೇ ರೀತಿಯ ದೌರ್ಜನ್ಯ ನಡೆಸಲಾಗಿದೆ. ಕಾಂಗ್ರೆಸ್ ಇದಕ್ಕೆ  ಅವಕಾಶ ಕೊಡುವುದಿಲ್ಲ ಎಂದು ಹೇಳಿದರು.  ಕಾಂಗ್ರೆಸ್ ಉಪಾಧ್ಯಕ್ಷ ಎಚ್.ಹನುಮಂತಪ್ಪ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕಾಗಿ ಹುಟ್ಟಿದ ಪಕ್ಷ ಅಲ್ಲ. ಅಧಿಕಾರ ಇರಲಿ, ಬಿಡಲಿ ತಮ್ಮ ಸಿದ್ಧಾಂಗಳನ್ನು  ಬದಲಾಯಿಸಬಾರದು. ಮೊದಲು ನಾವು ಕೀಳರಿಮೆಯಿಂದ ಹೊರ ಬರಬೇಕು. ಅನ್ಯಾಯದ ವಿರುದ್ಧ ಧ್ವನಿ ಎತ್ತಬೇಕು ಎಂದರು.

ಬಿಜೆಪಿಯಲ್ಲಿ ಚಿಂತಕರ ಛಾವಡಿ ಸದಾ ಕ್ರಿಯಾಶೀಲವಾಗಿರುತ್ತದೆ. ಕಾಂಗ್ರೆಸ್‍ನಲ್ಲಿ ಆಗೊಮ್ಮೆ, ಈಗೊಮ್ಮೆ ಎಚ್ಚರಗೊಳ್ಳುತ್ತದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಹಿರಿಯ ಕಾಂಗ್ರೆಸ್ ನಾಯಕರಾದ ಎಂ.ವಿ.ರಾಜಶೇಖರನ್, ಮತ್ತು ಬಿ.ಎಲ್.ಶಂಕರ್ ಮಾತನಾಡಿದರು.   ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಶೇಖರ್, ವಿಧಾನಪರಿಷತ್ ಸದಸ್ಯ ಎಚ್.ಎಂ. ರೇವಣ್ಣ, ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ.ಆನಂದ್,  ಎನ್‍ಎಸ್‍ಯುಐ ಅಧ್ಯಕ್ಷ ಮಂಜುನಾಥ್‍ಗೌಡ ಮತ್ತಿತರರು ಕಾರ್ಯಕ್ರಮದಲ್ಲಿದ್ದರು.

Facebook Comments

Sri Raghav

Admin