ಬಿಜೆಪಿಯಿಂದ ಜನಾದೇಶ ಉಲ್ಲಂಘನೆ ; ಕಾಂಗ್ರೆಸ್ ನಾಯಕರ ಆಕ್ರೋಶ : ನಾಳೆ ಪರಿಕ್ಕರ್ ಪ್ರಮಾಣ

ಈ ಸುದ್ದಿಯನ್ನು ಶೇರ್ ಮಾಡಿ

Parikar--01

ನವದೆಹಲಿ/ಪಣಜಿ/ಇಂಪಾಲ,ಮಾ.13-ಕರಾವಳಿ ರಾಜ್ಯ ಗೋವಾ ಮತ್ತು ಈಶಾನ್ಯ ರಾಜ್ಯ ಮಣಿಪುರದಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ಸರ್ಕಾರ ರಚನೆಗೆ ಮುಂದಾಗಿರುವ ಭಾರತೀಯ ಜನತಾಪಕ್ಷದ ವಿರುದ್ಧ ಕಾಂಗ್ರೆಸ್ ವರಿಷ್ಠರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಧಿಕಾರ ಬಲ, ಹಣಬಲ ಮತ್ತು ತೋಳ್ಬಲದಿಂದ ಜನಾದೇಶವನ್ನು ಧಿಕ್ಕರಿಸಿ ಈ ಎರಡು ರಾಜ್ಯಗಳಲ್ಲಿ ಅಧಿಕಾರಕ್ಕೇರಲು ತೊಡಗಿರುವ ಕಾಂಗ್ರೆಸ್ ಪ್ರಜಾಪ್ರಭುತ್ವದ ಮೌಲ್ಯವನ್ನು ಧಿಕ್ಕರಿಸಿದೆ ಎಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ.

ಆದರೆ ಕಾಂಗ್ರೆಸ್‍ನ ಈ ವಾದವನ್ನು ಟೀಕಿಸಿರುವ ಮಿತ್ರಪಕ್ಷಗಳು ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ರಾಜ್ಯಪಾಲರನ್ನು ಭೇಟಿ ಮಾಡದೆ ಹೊರಹೊಮ್ಮಿದೆ. ಇದಕ್ಕೆ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಆರೋಪಿಸಿದೆ.   ಈ ಎರಡೂ ರಾಜ್ಯಗಳಲ್ಲಿ ಜನಾದೇಶವಿಲ್ಲದಿದ್ದರೂ ಬಿಜೆಪಿ ಅಧಿಕಾರಕ್ಕೇರಲು ಹವಣಿಸಿ ಜನಾದೇಶವನ್ನು ತಿರುಚಿದೆ. ಜನತಂತ್ರ ವ್ಯವಸ್ಥೆಯ ಮೌಲ್ಯಗಳನ್ನು ಗಾಳಿಗೆ ತೂರಿದೆ ಎಂಬುದು ಕಾಂಗ್ರೆಸ್ ಮುಖಂಡರ ಆರೋಪವಾಗಿದೆ.   ಪಾಟ್ನಾದಲ್ಲಿ ಈ ಕುರಿತು ಹೇಳಿಕೆ ನೀಡಿರುವ ಬಿಹಾರ ಮಾಜಿ ಮುಖ್ಯಮಂತ್ರಿ ರಾಷ್ಟ್ರೀಯ ಜನತಾದಳ(ಆರ್‍ಜೆಡಿ) ಮುಖ್ಯಸ್ಥ ಲಾಲೂಪ್ರಸಾದ್ ಯಾದವ್ ಕಾಂಗ್ರೆಸ್ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕನ್ನು ಮಂಡಿಸಬೇಕಿತ್ತು. ಈ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ವಿಳಂಬ ಮಾಡಿರುವುದರಿಂದ ಬಿಜೆಪಿ ಇದರ ಪ್ರಯೋಜನ ಪಡೆದುಕೊಂಡಿದೆ ಎಂದು ನೇರವಾಗಿ ಆರೋಪಿಸಿದ್ದಾರೆ.

+ ನಾಳೆ ಪರಿಕರ್ ಪ್ರಮಾಣ:

ಕೇಂದ್ರ ರಕ್ಷಣಾ ಸಚಿವ ಮನೋಹರ್ ಪರಿಕರ್ ನಾಳೆ ಸಂಜೆ 5 ಗಂಟೆಗೆ ಗೋವಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸರ್ಕಾರ ರಚಿಸಲು ಬಿಜೆಪಿಗೆ ರಾಜ್ಯಪಾಲರು ಮೃದಲ ಸಿನ್ಹಾ ಆಹ್ವಾನಿಸಿದ್ದು , ಇನ್ನು 15 ದಿನಗಳ ಒಳಗೆ ಬಹುಮತ ಸಾಬೀತುಪಡಿಸುವಂತೆ ತಿಳಿಸಿದ್ದಾರೆ.   ಮಣಿಪುರದಲ್ಲೂ ಬಿಜೆಪಿ ಸರ್ಕಾರ: ಅತಂತ್ರ ವಿಧಾನಸಭೆ ಸೃಷ್ಟಿಯಾಗಿರುವ ಈಶಾನ್ಯ ರಾಜ್ಯ ಮಣಿಪುರದಲ್ಲೂ ಸರ್ಕಾರ ರಚನೆಗೆ ಬಿಜೆಪಿ ತಂತ್ರ ರೂಪಿಸಿದ್ದು , ಅನ್ಯ ಪಕ್ಷಗಳ 10 ಮಂದಿ ಶಾಸಕರು ಈಗಾಗಲೇ ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ.

60 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸೀಟು ಬೇಕಿದ್ದು , ಕಾಂಗ್ರೆಸ್ 28 ಹಾಗೂ ಬಿಜೆಪಿ 21 ಸ್ಥಾನ ಹೊಂದಿವೆ. 4 ಶಾಸಕರಿರುವ ನಾಗಾ ಪೀಪಲ್ ಪಾರ್ಟಿ(ಎನ್‍ಪಿಪಿ), 4 ಸದಸ್ಯರ ನಾಗಾ ಪೀಪಲ್ಸ್ ಫ್ರಂಟ್(ಎನ್‍ಪಿಎಫ್), ಓರ್ವ ಎಲ್‍ಜೆಪಿ, ಓರ್ವ ತೃಣಮೂಲ ಕಾಂಗ್ರೆಸ್ ಶಾಸಕರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಹೀಗಾಗಿ ಬಿಜೆಪಿಗೆ ಬಹುಮತ ಲಭಿಸಿದೆ.   ಇಂದು ಬಿಜೆಪಿಯ ಶಾಸಕಾಂಗ ಪಕ್ಷದ ನೂತನ ನಾಯಕನ ಆಯ್ಕೆಯಾಗಲಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin