ಬಿಜೆಪಿಯಿಂದ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

ಈ ಸುದ್ದಿಯನ್ನು ಶೇರ್ ಮಾಡಿ

bjp

ತುಮಕೂರು,ಸೆ.26-ಜಿಲ್ಲೆಯ ಪಾವಗಡದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸಲು ಜಮೀನು ನೀಡಿದ ರೈತರ ಸಾಲ ಮನ್ನಾ ಮಾಡಬೇಕು. ಎಲ್ಲ ಕೆರೆಗಳಿಗೂ ನೀರು ಹರಿಸಬೇಕೆಂದು ಒತ್ತಾಯಿಸಿ ರೈತರು, ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು.  ಮಾಜಿ ಸಚಿವ ರೇಣುಕಾಚಾರ್ಯ, ಮಾಜಿ ಜಿಲ್ಲಾಧ್ಯಕ್ಷ ಶಿವಪ್ರಸಾದ್, ಮಾಜಿ ಸಚಿವ ಸೊಗಡು ಶಿವಣ್ಣ ನೇತೃತ್ವದಲ್ಲಿ ಬಿಜೆಪಿ ರೈತ ಮೋರ್ಚಾ, ಕಿಸಾನ್ ಘಟಕದ ನೂರಾರು ಕಾರ್ಯಕರ್ತರು, ರೈತರು ಪುರಭವನದಿಂದ ಜಾಥಾ ನಡೆಸುವ ಮೂಲಕ ಜಿಲ್ಲಾಧಿಕಾರಿ ಬಳಿ ತೆರಳಿ ಪ್ರತಿಭಟನೆ ನಡೆಸಿದರು.

ಜಿಲ್ಲೆಯಲ್ಲಿ ಬರಗಾಲ ತಾಂಡವವಾಡುತ್ತಿದ್ದು, ಬಿತ್ತಿದ ಬೆಳೆಯೆಲ್ಲ ಒಣಗಿ ಹೋಗಿವೆ. ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡನೀಯ. ಇದಲ್ಲದೆ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ರೈತರು ತಮ್ಮ ಫಲವತ್ತಾದ ಭೂಮಿಯನ್ನು ನೀಡಿದ್ದು, ಅವರ ಜೀವನ ತೀವ್ರ ಸಂಕಷ್ಟಕ್ಕೀಡಾಗಿದೆ. ಕೂಡಲೇ ಅವರ ಸಾಲವನ್ನು ಮನ್ನಾ ಮಾಡಬೇಕೆಂದು ಒತ್ತಾಯಿಸಿದರು. ಇದುವರೆಗೂ ಸಾಲ ಬಾಂಧೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತರಿಗೆ ಯಾವುದೇ ಪರಿಹಾರ ಬಂದಿಲ್ಲ. ಇದರಿಂದ ಇವರ ಕುಟುಂಬಗಳು ತೀವ್ರ ಸಂಕಷ್ಟಕ್ಕೀಡಾಗಿದ್ದು , ಕೂಡಲೇ ಸರ್ಕಾರ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

► Follow us on –  Facebook / Twitter  / Google+

 

Facebook Comments

Sri Raghav

Admin