ಬಿಜೆಪಿಯೊಳಗಿನ ಕಚ್ಚಾಟದಿಂದ ಹೋಯ್ತು ಪಕ್ಷದ ಕಚೇರಿಯ ಸಿಬ್ಬಂದಿಯೊಬ್ಬನ ಕೆಲಸ

ಈ ಸುದ್ದಿಯನ್ನು ಶೇರ್ ಮಾಡಿ

BJP-Office

ಬೆಂಗಳೂರು,ಏ.28-ರಾಜ್ಯ ಬಿಜೆಪಿಯೊಳಗಿನ ಮುಸುಕಿನ ಗುದ್ದಾಟಕ್ಕೆ ಪಕ್ಷದ ಕಚೇರಿಯಲ್ಲಿ ಸಿಬ್ಬಂದಿಯೊಬ್ಬ ಕೆಲಸ ಕಳೆದುಕೊಳ್ಳುವಂತಾಗಿದೆ. ಬಿಜೆಪಿ ರಾಷ್ಟ್ರೀಯ ಸಂಘಟನಾ ಸಹ ಕಾರ್ಯದರ್ಶಿ ಸಂತೋಷ್ ಅವರ ಬೆಂಬಲಿಗ ಹಾಗೂ ಹಾವೇರಿ ಜಿಲ್ಲೆ ಬ್ಯಾಡಗಿ ಮೂಲದ ಮಲ್ಲಿಕಾರ್ಜುನ ಎಂಬುವರನ್ನು ಕಚೇರಿಯಿಂದ ಹೊರ ಹಾಕುವಂತೆ ರಾಜ್ಯಾಧ್ಯಕ್ಷ ಯಡಿಯೂರಪ್ಪ ಸೂಚಿಸಿದ್ದಾರೆ.   ಮೂಲತಃ ಮಲ್ಲಿಕಾರ್ಜುನ್ ಕಳೆದ 10 ವರ್ಷದಿಂದ ಟೈಪರೈಟರ್ ಆಗಿ ಕೆಲಸ ಮಾಡುತ್ತಿದ್ದರು. ಇವರು ಬಿಜೆಪಿ ಸಂತೋಷ್ ಅವರ ಬೆಂಬಲಿಗರು ಎಂಬ ಕಾರಣಕ್ಕಾಗಿ ಕೆಲಸದಿಂದ ಹೊರ ಹಾಕುವಂತೆ ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದೆ.ಗುರುವಾರ ನಗರದ ಅರಮನೆ ಮೈದಾನದಲ್ಲಿ ನಡೆದ ಅತೃಪ್ತರ ಸಮಾವೇಶಕ್ಕೆ ಮಲ್ಲಿಕಾರ್ಜುನ್ ಪಕ್ಷದ ಕಚೇರಿಯಿಂದಲೇ ನಿರ್ಣಯಗಳನ್ನು ಸಿದ್ದಪಡಿಸಿದ್ದಾರೆ ಎಂಬ ಗುಮಾನಿ ಇದೆ.   ಸಂತೋಷ್ ಅವರ ಸೂಚನೆಯಂತೆ ಟೈಪ್ ಮಾಡಿ ಕಳುಹಿಸಿಕೊಡಲಾಗಿತ್ತು. ಇದು ಅದೇ ಹೇಗೋ ಯಡಿಯೂರಪ್ಪನವರ ಕಿವಿಗೆ ತಲುಪುತ್ತಿದ್ದಂತೆ ಮಲ್ಲಿಕಾರ್ಜುನ್ ಅವರನ್ನು ಕೂಡಲೇ ಕೆಲಸದಿಂದ ವಜಾಗೊಳಿಸಬೇಕೆಂದು ಸೂಚಿಸಿದ್ದಾರೆ.   ಅಪ್ಪ-ಅಮ್ಮನ ಜಗಳದಲ್ಲಿ ಕೂಸು ಬಡವಾಯಿತು ಎನ್ನುವಂತಾಗಿದೆ ಮಲ್ಲಿಕಾರ್ಜುನ್ ಸ್ಥಿತಿ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin