ಬಿಜೆಪಿ ಅಧಿಕಾರಕ್ಕೆ ಬಂದರೆ ‘ಮಹಾ’ವಿವಾದ ಇತ್ಯರ್ಥ : ಯಡಿಯೂರಪ್ಪ

ಈ ಸುದ್ದಿಯನ್ನು ಶೇರ್ ಮಾಡಿ

Yadiyurappa

ಬೀದರ್, ಫೆ.27- ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮಹದಾಯಿ ವಿವಾದ ಇತ್ಯರ್ಥ ಪಡಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿಗೆ ಬೆಂಕಿ ಹಚ್ಚಿದವರೇ ಸೋನಿಯಾಗಾಂಧಿ, ವಿವಾದ ಕಗ್ಗಂಟಾಗಲು ಅವರೇ ಕಾರಣ ಎಂದು ನೇರವಾಗಿ ಆರೋಪಿಸಿದರು. ಟ್ರಿಬ್ಯುನಲ್ ರಚನೆ ಮಾಡಿದವರು ಕಾಂಗ್ರೆಸ್‍ನವರೇ ಎಂದು ವಾಗ್ದಾಳಿ ನಡೆಸಿದ ಅವರು, ರೈತರಿಗೆ ಈ ಬಗ್ಗೆ ಉತ್ತರಿಸಲು ಆಗದೆ ರಾಹುಲ್‍ಗಾಂಧಿ ಅವರು ತಪ್ಪಿಸಿಕೊಂಡು ಓಡಾಡುತ್ತಿದ್ದಾರೆ ಎಂದು ಟೀಕಿಸಿದರು.

ತಮ್ಮ 75ನೇ ಹುಟ್ಟುಹಬ್ಬದ ನಿಮಿತ್ತ ಇಂದು ಬೆಳಗ್ಗೆ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ನಂತರ ದಾವಣಗೆರೆ ಸಮಾವೇಶದಲ್ಲಿ ಪಾಲ್ಗೊಳ್ಳಲು ತೆರಳಿದರು. ಪಕ್ಷದ ಹಿರಿಯ ನಾಯಕರು, ಕಾರ್ಯಕರ್ತರು ಈ ಸಂದರ್ಭದಲ್ಲಿದ್ದರು. ಯಡಿಯೂರಪ್ಪ ಅವರ ಹಟ್ಟುಹಬ್ಬದ ನಿಮಿತ್ತ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಿಸಿದರು.

Facebook Comments

Sri Raghav

Admin