‘ಬಿಜೆಪಿ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನ ಬರೀ ಕಚ್ಚಾಟವನ್ನೇ ನೋಡಬೇಕಾಗುತ್ತದೆ’ : ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

kpcc--dinesh--gundurao

ಬೆಂಗಳೂರು, ಜ.10– ಅಧಿಕಾರಕ್ಕೆ ಬರುವ ಮೊದಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪ ಹಾದಿ-ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಇನ್ನು ಇವರ ಕೈಗೆ ಅಧಿಕಾರ ಸಿಕ್ಕರೆ ರಾಜ್ಯದ ಗತಿ ಏನು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಆತಂಕ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದಾಗಲೂ ಬಿಜೆಪಿಯವರು ಕಚ್ಚಾಡುವುದು ಹೇಗೆಂದು ತೋರಿಸಿಕೊಟ್ಟಿದ್ದಾರೆ. ಅವರ ಪಕ್ಷದಲ್ಲಿ ಬಿ.ಎಸ್.ಯಡಿಯೂರಪ್ಪ ಮತ್ತು ಈಶ್ವರಪ್ಪ ಮಾತ್ರವಲ್ಲದೆ ಇನ್ನೂ ಅನೇಕ ಮಂದಿ ನಾಯಕರಿದ್ದಾರೆ. ಎಲ್ಲರೂ ಪ್ರತ್ಯೇಕವಾಗಿ ಗುಂಪುಗಾರಿಕೆ ಮಾಡುತ್ತಾರೆ. ಒಂದು ವೇಳೆ ಆ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದ ಜನ ಬರೀ ಕಚ್ಚಾಟವನ್ನೇ ನೋಡಬೇಕಾಗುತ್ತದೆ ಎಂದು ಟೀಕಿಸಿದರು.

ಇನ್ನು ಚುನಾವಣೆಯೇ ನಡೆದಿಲ್ಲ, ಅಧಿಕಾರವೂ ಸಿಕ್ಕಿಲ್ಲ. ಆದರೆ, ಬಿಜೆಪಿಯ ಯಡಿಯೂರಪ್ಪ, ಈಶ್ವರಪ್ಪ ಪರಸ್ಪರ ಜಗಳವಾಡುತ್ತಿರುವುದು ಹಾಸ್ಯಾಸ್ಪದ ಎಂದರು. ಈಶ್ವರಪ್ಪನವರಿಗೆ ಹಿಂದಾನೂ ಗೊತ್ತಿಲ್ಲ, ಬ್ರಿಗೇಡೂ ಗೊತ್ತಿಲ್ಲ. ರಾಜಕೀಯಕ್ಕಾಗಿ ಇಂತಹ ಹೆಸರುಗಳನ್ನು ಬಳಸಿಕೊಳ್ಳುತ್ತಿದ್ದಾರೆ ಎಂದು ದಿನೇಶ್ ಗುಂಡೂರಾವ್ ವ್ಯಂಗ್ಯವಾಡಿದರು.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin