ಬಿಜೆಪಿ ಅಧಿಕಾರ ಹಿಡಿಯಲು ಕಾರ್ಯಕರ್ತರ ಪರಿಶ್ರಮ ಅಗತ್ಯ

ಈ ಸುದ್ದಿಯನ್ನು ಶೇರ್ ಮಾಡಿ

bjp

 

ಕೊಳ್ಳೇಗಾಲ, ಆ.25- ರಾಜ್ಯದಲ್ಲಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲು ಪ್ರತಿಯೊಬ್ಬ ಕಾರ್ಯಕರ್ತರ ಹೆಚ್ಚಿನ ಪರಿಶ್ರಮದ ಅಗತ್ಯವಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರೊರ.ಕೆ.ಆರ್.ಮಲ್ಲಿಕಾರ್ಜುನ ಹೇಳಿದರು.  ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಮಂಡಲ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ರಾಜ್ಯದಲ್ಲಿ 150ಕ್ಕೂ ಹೆಚ್ಚು ಮಂದಿ ಗೆದ್ದು ಬರಲಿದ್ದಾರೆ. ಜಿಲ್ಲೆಯ 4 ವಿಧಾನಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಅಧಿಕಾರದ ಗದ್ದುಗೆ ಏರಬೇಕು. ಅದಕ್ಕೆ ಕಾರ್ಯಕರ್ತರು ಹೆಚ್ಚು ಶ್ರಮ ವಹಿಸಬೇಕು ಎಂದರು.

ಬಿಜೆಪಿ ಮಂಡಲ ಪದಾಧಿಕಾರಿಗಳು ಗ್ರಾಮಾಂತರ ಮಟ್ಟದಲ್ಲಿ ಪಕ್ಷ ಸಂಘಟಿಸಿ ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಕಾರ್ಯಕರ್ತರಿಗೆ ಕರೆ ನೀಡಿದರು.ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ ಮಾತನಾಡಿ, ಕಳೆದ 3 ವರ್ಷಗಳಲ್ಲಿ ಕಾಂಗ್ರೆಸ್ ಆಡಳಿತ ವಿಫಲವಾಗಿದೆ. ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ಹಲವಾರು ಜನಪರ ಯೋಜನೆಗಳನ್ನು ಜಾರಿತರಲಾಗಿತ್ತು. ಆ ಯೋಜನೆಗಳನ್ನು ಈಗಿನ ಕಾಂಗ್ರೆಸ್ ಸರ್ಕಾರ ಸರಿಯಾದ ರೀತಿಯಲ್ಲಿ ನಿರ್ವಹಿಸುತ್ತಿಲ್ಲ ಎಂದು ಕಿಡಿಕಾರಿದರು.

ತಮ್ಮ ಅವಧಿಯಲ್ಲಿ ಪಟ್ಟಣದಲ್ಲಿ ನಗರೋತ್ಥಾನ, ಯುಜಿಡಿ, 24*7 ಕುಡಿಯುವ ನೀರಿನ ಯೋಜನೆಗಳನ್ನು ಸಮರ್ಪಕವಾಗಿ ಪೂರೈಸದೆ ಈಗಿನ ಸರ್ಕಾರ ನೆನೆಗುದಿಗೆ ಬಿದ್ದಿದೆ ಎಂದು ಹೇಳಿದರು.ನಿರ್ಗಮಿತ ಟೌನ್ ಅಧ್ಯಕ್ಷ ನಾಗರಾಜಪ್ಪ ಅವರು ನೂತನ ಅಧ್ಯಕ್ಷ ರಮೇಶ್ ಅವರಿಗೆ ಬಿಜೆಪಿ ಬಾವುಟ ಹಸ್ತಾಂತರಿಸುವ ಮೂಲಕ ಪದಗ್ರಹಣ ನಡೆಯಿತು.ಮೈಸೂರು ಜಿಲ್ಲಾ ಘಟಕದ ಉಪಾಧ್ಯಕ್ಷ ರಾಜೇಶ್, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ನೂರೊಂದು ಶೆಟ್ಟಿ, ರಾಷ್ಟ್ರೀಯ ಪರಿಷತ್ ಸದಸ್ಯ ವೆಂಕಟಸ್ವಾಮಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಚಂದ್ರಕಲಾ ಬಾಯಿ, ಪ್ರಧಾನ ಕಾರ್ಯದರ್ಶಿ ಉಷಾರಾಣಿ, ಜಿಲ್ಲಾ ಹಿಂದುಳಿದ ವರ್ಗಗಳ ಪ್ರಧಾನ ಕಾರ್ಯದರ್ಶಿ ನಟರಾಜೇಗೌಡ, ಜಿಪಂ ಸದಸ್ಯ ನಾಗರಾಜು, ಜಯಂತಿ, ಶೀಲಾ ಮಲ್ಲೇಶ್, ತಾಪಂ ಸದಸ್ಯ ಮರಿಸ್ವಾಮಿ, ಕೃಷ್ಣಪ್ಪ ಹಾಜರಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin