ಬಿಜೆಪಿ ಕಾರ್ಪೊರೇಟರ್ ನಿಂದ ರೇಪ್ : ಮಹಿಳೆ ದೂರು ದಾಖಲು

ಈ ಸುದ್ದಿಯನ್ನು ಶೇರ್ ಮಾಡಿ

Rape-Mumbai--01

ಮುಂಬೈ,ಸೆ.13-ಬೃಹನ್ಮುಂಬೈ ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಒಬ್ಬರ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ. ಬಿಜೆಪಿ ಕಾರ್ಪೊರೇಟರ್ ದಯಾ ಗಾಯಕ್‍ವಾಡ್ ತಮ್ಮ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆಯೊಬ್ಬರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.  ಮಹಿಳೆಯ ದೂರು ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ತಲೆತಪ್ಪಿಸಿಕೊಂಡಿರುವ ಗಾಯಕ್‍ವಾಡ್‍ಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ದಯಾ ಗಾಯಕ್‍ವಾಡ್ ಅತ್ಯಾಚಾರದ ನಂತರ ನಾಪತ್ತೆಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯನ್ನು ತಪಾಸಣೆಗಾಗಿ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ.

Facebook Comments

Sri Raghav

Admin