ಬಿಜೆಪಿ ಕುದುರೆ ವ್ಯಾಪಾರಕ್ಕೆ ಯಶಸ್ಸು ಸಿಗಲಿಲ್ಲ : ಸತೀಶ್ ಜಾರಕಿಹೊಳಿ

ಈ ಸುದ್ದಿಯನ್ನು ಶೇರ್ ಮಾಡಿ

Satish-Jarakihole

ಬೆಂಗಳೂರು, ಆ.9-ಕುದುರೆ ವ್ಯಾಪಾರಕ್ಕೆ ಯಾವುದೇ ಯಶಸ್ಸು ಇರುವುದಿಲ್ಲ ಎನ್ನುವುದನ್ನು ಗುಜರಾತ್‍ನ ರಾಜ್ಯಸಭೆ ಚುನಾವಣೆ ಫಲಿತಾಂಶದ ನಂತರವಾದರೂ ಬಿಜೆಪಿ ಅರ್ಥ ಮಾಡಿಕೊಳ್ಳಬೇಕು ಎಂದು ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತಿನಲ್ಲಿ ನಡೆದ ಚುನಾವಣೆಗೆ ಬಿಜೆಪಿಯ ಕುದುರೆ ವ್ಯಾಪಾರಕ್ಕೆ ಯಶಸ್ಸು ಸಿಗಲಿಲ್ಲ. ಆ ರೀತಿ ಮಾಡಬಾರದಿತ್ತು ಎಂದರು.

ಶಾಸಕರ ಮೇಲೆ ಒತ್ತಡ ಹೇರುವುದನ್ನು ನಿಲ್ಲಿಸಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಚುನಾವಣೆಯನ್ನು ಎದುರಿಸಬೇಕು. ನಮ್ಮ ರಾಜ್ಯದಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಶಾಸಕರು ಆ ಪಕ್ಷದ ಆಂತರಿಕ ವಿಚಾರದಿಂದಾಗಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಿದ್ದರು. ಆದರೆ ನಾವು ಅವರ ಮೇಲೆ ಯಾವುದೇ ಒತ್ತಡ ಹೇರಿರಲಿಲ್ಲ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಗುಜರಾತ್ ರಾಜ್ಯಸಭೆಗೆ ನಡೆದ ಚುನಾವಣೆಯಲ್ಲಿ ವಿಜೇತರಾದ ಅಹಮ್ಮದ್ ಪಟೇಲ್ ಅವರನ್ನು ಅಭಿನಂದಿಸಿದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin