ಬಿಜೆಪಿ ಜೊತೆ ಶಿವಸೇನೆ ಮೈತ್ರಿ ಕುರಿತ ನಾಳೆ ನಿರ್ಧಾರ

ಈ ಸುದ್ದಿಯನ್ನು ಶೇರ್ ಮಾಡಿ

Shivasene

ಮುಂಬೈ, ಜ.25-ಬಿಜೆಪಿ ಜೊತೆಗಿನ ಮೈತ್ರಿ ಕುರಿತ ತನ್ನ ನಿಲುವನ್ನು ನಾಳೆ (ಜ.26) ಮುಂಬೈನಲ್ಲಿ ನಡೆಯಲಿರುವ ಶಿವಸೇನೆ ಮಹಾಸಭೆಯಲ್ಲಿ ಪ್ರಕಟಿಸುವುದಾಗಿ ಪಕ್ಷದ ನಾಯಕ ಉದ್ಧವ್ ಠಾಕ್ರೆ ಹೇಳಿದ್ದಾರೆ. ಶಿವಸೇನೆ ಸಂಸ್ಥಾಪಕ ಬಾಳಾ ಠಾಕ್ರೆ ಅವರ 91ನೇ ಜನ್ಮ ದಿನಾಚರಣೆ ಅಂಗವಾಗಿ ನಿನ್ನೆ ರಾತ್ರಿ ನಡೆದ ಸಮಾರಂಭವೊಂದರಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣೆ ನಿರ್ಣಾಯಕ ದಿಕ್ಸೂಚಿಯಾಗಿದೆ ಎಂದು ವ್ಯಾಖ್ಯಾನಿಸಿದರು.

ಕೆಲವು ರಾಜಕಾರಣಿಗಳು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ಸಮಾಜವನ್ನು ಒಡೆಯುತ್ತಿದ್ದಾರೆ. ದೇಶವನ್ನು ಸುಭದ್ರವಾಗಿಡಲು ಹಿಂದುಗಳೆಲ್ಲರೂ ಒಗ್ಗಟ್ಟಾಗಿರುವಂತೆ ಅವರು ಕರೆ ನೀಡಿದರು. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟೀಕಾಪ್ರಹಾರ ಮುಂದುವರಿಸಿದ ಅವರು, ಜಾಹೀರಾತು ಮತ್ತು ಪ್ರಚಾರಗಳಿಗೆ ಖರ್ಚು ಮಾಡುವ ಹಣವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಬೇಕು. ಜನರಿಗೆ ಮುಖ ತೋರಿಸಲು ಹಣವನ್ನು ಖರ್ಚು ಮಾಡುವ ಅಗತ್ಯವಿಲ್ಲ ಎಂದು ಅವರು ಹೇಳಿದರು.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin