ಬಿಜೆಪಿ ಬಂದ್ ಗೆ ನೀರಸ ಪ್ರತಿಕ್ರಿಯೆ, ಮೈಸೂರಲ್ಲಿ ಪ್ರತಾಪ್ ಸಿಂಹ ಪೊಲೀಸರ ವಶಕ್ಕೆ

ಈ ಸುದ್ದಿಯನ್ನು ಶೇರ್ ಮಾಡಿ

Bandh

ಬೆಂಗಳೂರು. ಮೇ. 28 : ರೈತರ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಬಿಜೆಪಿ ಕರೆಕೊಟ್ಟ ಬಂದ್ ಗೆ ನೀರಸ ಪ್ರತಿಕ್ರಿಯೆ ಉಂಟಾಗಿದೆ. ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಬಿಜೆಪಿ ಕರೆ ನೀಡಿರುವ ಬಂದ್ ಗೆ ಬೆಂಬಲ ವ್ಯಕ್ತವಾಗಿಲ್ಲ. ಮೈಸೂರಿನಲ್ಲಿಯೂ ಕೂಡ ಬಿಜೆಪಿ ಮುಖಂಡರು ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬನ್ನಿ ಮಂಟಪದ ಬಳಿ ಪ್ರತಿಭಟನೆ ನಡೆಸುತ್ತಿದ್ದ ವೇಳೆ ಬಿಜೆಪಿಯ ಕೆಲ ಕಾರ್ಯಕರ್ತರು ಹಾಗೂ ಪ್ರತಾಪ್ ಸಿಂಹ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಹಲವು ಜಿಲ್ಲೆಗಳಲ್ಲಿ ಬಿಜೆಪಿ ಪ್ರತಿಭಟನೆಗೆ ಇಳಿದಿದೆ. ಇನ್ನೂ ರಾಜ್ಯಾದ್ಯಂತ ಯಾವುದೇ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಹೀಗಾಗಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ. ಅಲ್ಲದೇ ಬಂದ್ ಮಾಡುವ, ಪ್ರತಿಭಟನೆ ಮಾಡುವ ರೈತ ಸಂಘಟನೆಗಳಿಗೆ ಬೆಂಬಲ ನೀಡುವುದಾಗಿ ಬಿಜೆಪಿ ತಿಳಿಸಿದೆ. ಬೆಂಗಳೂರಿನಲ್ಲಿ ಬಂದ್ ಇರುವುದಿಲ್ಲ, ಕೆಎಸ್.ಆರ್ ಟಿಸಿ, ಬಿಎಂಟಿಸಿ ಬಸ್ ಗಳು ಎಂದಿನಂತೆ ಸಂಚರಿಸಲಿವೆ.

ರಾಯಚೂರಲ್ಲಿ ಬಂದ್ ವಿಫಲ :
ರೈತ ಸಾಲಮನ್ನಾಕ್ಕೆ ಆಗ್ರಹಿಸಿ ಇಂದು ಕರೆ ನೀಡಿರುವ ಕರ್ನಾಟಕ ಬಂದ್ ರಾಯಚೂರು ಜಿಲ್ಲೆಯಾದ್ಯಂತ ವಿಫಲಗೊಂಡಿದೆ. ನಗರದಲ್ಲಿ ಬಸ್ ಸಂಚಾರ, ಆಟೋ, ಅಂಗಡಿ ಮುಗ್ಗಟ್ಟು ತರಕಾರಿ ಮಾರುಕಟ್ಟೆ ವ್ಯಾಪರ ವಹಿವಾಟು ಎಂದಿನಂತೆ ಜನ ಜೀವನ ಸಾಗುತ್ತಿದೆ. ಇನ್ನು ಬಂದ್ ಹಿನ್ನಲೆಯಲ್ಲಿ ಯಾವುದೇ ಶಾಲಾ-ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿದ್ದು, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸಂಘಟನೆ ಬಂದ್ ಬೆಂಬಲ ವ್ಯಕ್ತಪಡಿಸಿಲ್ಲ. ರೈತರ ಸಂಪೂರ್ಣ ಸಾಲಮನ್ನಾಕ್ಕೆ ಆಗ್ರಹಿಸಿ ಇಂದು ಬಿಜೆಪಿ ರಾಜ್ಯವನ್ನ ಬಂದ್ ಕರೆ ನೀಡುವ ಮೂಲಕ ಸರಕಾರಕ್ಕೆ ಒತ್ತಡ ಬಂದ್ ಕರೆ ನೀಡಲಾಗುತ್ತಿತ್ತು. ಆದ್ರೆ ಇಲ್ಲಿಯವರೆಗೆ ರಾಯಚೂರು ಜಿಲ್ಲೆಯಲ್ಲಿ ಬಂದ್ ವಿಫಲಗೊಂಡಿದ್ದೆ, ಸುಮಾರು 11 ಗಂಟೆಗೆ ಬಿಜೆಪಿ ಮುಖಂಡರು ಸಾಂಕೇತಿಕವಾಗಿ ಪ್ರತಿಭಟಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಯಾವುದೇ ಅಹಿಕತರ ಘಟನೆ ನಡೆಯದಂತೆ ಜಿಲ್ಲಾ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋ ಬಸ್ತ ವ್ಯವಸ್ಥೆ ಕೈಗೊಂಡಿದೆ.

Facebook Comments

Sri Raghav

Admin