ಬಿಜೆಪಿ ಯವರಿಂದ ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ, ರಮ್ಯಾ ಪರ ಸಿಎಂ ಬ್ಯಾಟಿಂಗ್

ಈ ಸುದ್ದಿಯನ್ನು ಶೇರ್ ಮಾಡಿ

Ramya

ಹುಬ್ಬಳ್ಳಿ,ಆ29- ಪಾಕಿಸ್ತಾನದ ಪರ ಮಾಜಿ ಸಂಸದೆ ರಮ್ಯಾ ನೀಡಿರುವ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾಕಿಸ್ತಾನದಲ್ಲಿ ತಮ್ಮನ್ನು ಚೆನ್ನಾಗಿ ನೋಡಿಕೊಂಡರು ಎಂದು ನೀಡಿರುವ ಹೇಳಿಕೆಯಲ್ಲಿ ತಪ್ಪು ಏನಿದೆ ಎಂದು ಪ್ರಶ್ನಿಸಿದ ಆವರು ಬಿಜೆಪಿ ಯವರಿಂದ ದೇಶಭಕ್ತಿಯ ಪಾಠ ಕಲಿಯಬೇಕಾಗಿಲ್ಲ ಎಂದು ಟಾಂಗ್ ನೀಡಿದರು.

ಪ್ರಧಾನಿ ಮೋದಿಯವರು ಪಾಕಿಸ್ತಾನಕ್ಕೆ ಏಕೆ ಹೋಗಿದ್ದರು. ಅಲ್ಲಿಯ ಪ್ರಧಾನಿ ನವಾಜ್ ಶರೀಫ್‍ರೊಡನೆ ಇವರ ನಂಟಸ್ಥಿಕೆ ಇತ್ತಾ? ಎಂಬುದನ್ನು ಸ್ಪಷ್ಟಪಡಿಸಬೇಕು ಎಂದರು. ಹಿರಿಯ ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿಯವರು ಮೊಹಮ್ಮದ್ ಅಲಿ ಜಿನ್ನಾ ಅವರನ್ನು ಸೆಕ್ಯುಲರ್ ಎಂದು ಹೇಳಿದ್ದರು. ಅದಕ್ಕೆ ಬಿಜೆಪಿ ಉತ್ತರವೇನು?.ಬಿಜೆಪಿ ವಿನಾ ಕಾರಣ ಎಲ್ಲಾ ವಿಷಯಗಳಲ್ಲೂ ರಾಜಕಾರಣ ಮಾಡುತ್ತಿದೆ. ಆರ್‍ಎಸ್‍ಎಸ್ ನವರು ಬಿಜೆಪಿ, ಎಬಿವಿಪಿಯನ್ನು ಎತ್ತಿಕಟ್ಟಿ ರಾಜ್ಯದಲ್ಲಿ ಗೊಂದಲ ಮೂಡಿಸುವ ಹಿನ್ನಾರ ನಡೆಸಿದ್ದಾರೆ ಎಂದು ಆರೋಪ ಮಾಡಿದರು. ನಂತರ ಅವರು ಸಮಾರಂಭದಲ್ಲಿ ಪಾಲ್ಗೊಳ್ಳಲು ಕೊಪ್ಪಳಕ್ಕೆ ತೆರಳಿದರು.

► Follow us on –  Facebook / Twitter  / Google+

Facebook Comments

Sri Raghav

Admin