ಬಿಜೆಪಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

Siddaramai

ಬಾಗಲಕೋಟೆ, ನ.1- ಬಿಜೆಪಿಗೆ ಇನ್ನೊಂದು ಹೆಸರೇ ಸುಳ್ಳು. ಬಿಜೆಪಿ ನಾಯಕರು ಸುಳ್ಳು ಹೇಳಿಕೊಂಡೇ ಬರುತ್ತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದಂದಿನಿಂದ ಸರ್ಕಾರ ಬೀಳುತ್ತೆ ಬೀಳುತ್ತೆ ಎಂದು ಹೇಳುತ್ತಿದ್ದಾರೆ. ಇಂತಹ ಸುಳ್ಳು ಹೇಳಿಕೆಗಳಿಗೆ ಪ್ರತಿಕ್ರಿಯಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ವಯಸ್ಸಾಗಿದೆ. ಅವರು ಸರ್ಕಾರ ರಚಿಸುವ ಬಗ್ಗೆ ದಿನಾ ಕನಸು ಕಾಣುತ್ತಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಬಗ್ಗೆ ಯೋಚನೆ ಮಾಡುತ್ತಿದಾರೆ ಎಂದು ವ್ಯಂಗ್ಯವಾಡಿದರು.

ಬಿಜೆಪಿಗೆ ಜನರು ಬಹುಮತ ನೀಡಿಲ್ಲ. ಆದ್ದರಿಂದ ಯಡಿಯೂರಪ್ಪ ಮುಖ್ಯಮಂತ್ರಿಯಾಗಲು ಸಾಧ್ಯವೇ ಇಲ್ಲ ಎಂದು ಹೇಳಿದರು. ಜನಾರ್ದನ ರೆಡ್ಡಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಆತ ಮನುಷ್ಯತ್ವ, ಸಂಸ್ಕøತಿ ಇಲ್ಲದ ಆಸಾಮಿ. ಮನುಷ್ಯತ್ವ ಇಲ್ಲದವರು ಮೃಗಗಳಿಗೆ ಸಮ ಎಂದು ಹೇಳಿದರು.

ಇಂತಹವರ ಹೇಳಿಕೆಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಜನಾರ್ದನ ರೆಡ್ಡಿ ಹೇಳಿಕೆ ಬಗ್ಗೆ ಬಿಜೆಪಿಯವರು ಏನು ಬೇಕಾದರೂ ಹೇಳಿಕೊಳ್ಳಲಿ. ಅದಕ್ಕೂ ನನಗೂ ಸಂಬಂಧವಿಲ್ಲ ಸಿದ್ದರಾಮಯ್ಯ ಹೇಳಿದರು. ಸಮ್ಮಿಶ್ರ ಸರ್ಕಾರ ಪತನಕ್ಕೆ ಬಿಜೆಪಿಯವರು ನವೆಂಬರ್ 6ರ ಡೆಡ್‍ಲೈನ್ ನೀಡಿದ್ದಾರೆ. ಅವರು ಬರೀ ಹಸಿ ಸುಳ್ಳುಗಳೇ ಹೇಳುತ್ತಿದ್ದಾರೆ. ಇದಕ್ಕೆಲ್ಲಾ ಉತ್ತರಿಸುವ ಅಗತ್ಯವಿಲ್ಲ ಎಂದು ಹೇಳಿದರು.

Facebook Comments