ಬಿಜೆಪಿ ಸೇರಿದ ಪವರ್ ಮಿನಿಸ್ಟರ್ ಡಿಕೆಶಿ ಬೆಂಬಲಿಗ

ಈ ಸುದ್ದಿಯನ್ನು ಶೇರ್ ಮಾಡಿ

DKS-BJP

ಬೆಂಗಳೂರು, ಆ.27- ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಕಟ್ಟಾ ಬೆಂಬಲಿಗ ವರಪ್ರಸಾದ್ ರೆಡ್ಡಿ ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿಗೆ ಸೇರ್ಪಡೆಗೊಂಡರು. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿಯಲ್ಲಿಂದು ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಸಮ್ಮುಖದಲ್ಲಿ ವರಪ್ರಸಾದ್ ರೆಡ್ಡಿ ಸೇರ್ಪಡೆಗೊಂಡರು. ಈ ವೇಳೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ, ಶಾಸಕ ಸಿ.ಟಿ.ರವಿ. ಮತ್ತಿತರರು ಪಾಲ್ಗೊಂಡಿದ್ದರು.
ಬಿಬಿಎಂಪಿ ಚುನಾವಣೆಯಲ್ಲಿ ವರಪ್ರಸಾದ್ ರೆಡ್ಡಿ ಉತ್ತರಹಳ್ಳಿ ವಾರ್ಡ್‍ನಿಂದ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು.

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin