ಬಿಜೆಪಿ ಸೇರಿ ರಾಜ್ಯಕ್ಕಾಗಮಿಸುತ್ತಿರುವ ಎಸ್.ಎಂ.ಕೃಷ್ಣ ಅದ್ದೂರಿ ಸ್ವಾಗತಕ್ಕೆ ಸಿದ್ಧತೆ

ಈ ಸುದ್ದಿಯನ್ನು ಶೇರ್ ಮಾಡಿ

SMKrishna-Krishna

ಬೆಂಗಳೂರು,ಮಾ.24-ಎರಡು ದಿನಗಳ ಹಿಂದೆ ಬಿಜೆಪಿಗೆ ಸೇರ್ಪಡೆಯಾಗಿದ್ದ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ಇಂದು ಸಂಜೆ ನಗರಕ್ಕೆ ಹಿಂದಿರುಗಲಿದ್ದಾರೆ. ಸಂಜೆ 5 ಗಂಟೆಗೆ ನವದೆಹಲಿಯಿಂದ ಆಗಮಿಸಲಿರುವ ಕೃಷ್ಣ ಅವರನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅದ್ಧೂರಿಯಾಗಿ ಸ್ವಾಗತಿಸಿ ತದನಂತರ ಭವ್ಯ ಮೆರವಣಿಗೆಯ ಮೂಲಕ ಮಲ್ಲೇಶ್ವರದ ಕಚೇರಿಗೆ ಬಿಜೆಪಿ ನಾಯಕರು ಮುಂದಾಗಿದ್ದಾರೆ.  ಕೇಂದ್ರ ಸಚಿವರಾದ ಅನಂತಕುಮಾರ, ಡಿ.ವಿ.ಸದಾನಂದಗೌಡ, ರಮೇಶ್ ಜಿಗಜಿಣಗಿ ಜೊತೆ ಕೃಷ್ಣ ಆಗಮಿಸಲಿದ್ದು , ಮುಖಂಡ ಆರ್.ಅಶೋಕ್, ಶಾಸಕರಾದ ವೈ.ಎ.ನಾರಾಯಣಸ್ವಾಮಿ, ಮುನಿರಾಜು, ಡಾ.ಅಶ್ವಥ್ ನಾರಾಯಣ ಸೇರಿದಂತೆ ಪಕ್ಷದ ಕಾರ್ಯಕರ್ತರು ವಿಮಾನ ನಿಲ್ದಾಣಕ್ಕೆ ತೆರಳಿ ಭವ್ಯ ಸ್ವಾಗತ ಕೋರಲಿದ್ದಾರೆ.

ಬಳಿಕ ಪಕ್ಷದ ಕಚೇರಿಗೆ ಆಗಮಿಸಲಿರುವ ಕೃಷ್ಣ ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮತ್ತಿತರ ಮುಖಂಡರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಕಾರ್ಯಕರ್ತರನ್ನು ಕುರಿತು ಅವರು ಮಾತನಾಡಲಿದ್ದಾರೆ. ಮುಂದಿನ ತಿಂಗಳು ನಡೆಯಲಿರುವ ನಂಜನಗೂಡು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವಂತೆ ಯಡಿಯೂರಪ್ಪ ಮನವಿ ಮಾಡಿದ್ದಾರೆ. ಆದರೆ ಪ್ರಚಾರ ನಡೆಸುವ ಬಗ್ಗೆ ಕೃಷ್ಣ ಅವರು ಯಾವ ತೀರ್ಮಾನ ಕೈಗೊಂಡಿದ್ದಾರೆ ಎಂಬ ಬಗ್ಗೆ ಯಾರೊಬ್ಬರಿಗೂ ತಿಳಿದಿಲ್ಲ. ಮೂಲಗಳ ಪ್ರಕಾರ ಒಂದೆರಡು ಬಾರಿ ಗುಂಡ್ಲುಪೇಟೆ ಹಾಗೂ ನಂಜನಗೂಡಿಗೆ ಭೇಟಿ ನೀಡಿ ಪ್ರಚಾರ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin