ಬಿಬಿಎಂಪಿಗೆ 4 ಸಾವಿರ ಪೌರಕಾರ್ಮಿಕರಿಗೆ ಬಿಸಿಯೂಟ

ಈ ಸುದ್ದಿಯನ್ನು ಶೇರ್ ಮಾಡಿ

BBMP

ಬೆಂಗಳೂರು, ಆ.19-ಬಿಬಿಎಂಪಿಗೆ 4 ಸಾವಿರ ಪೌರಕಾರ್ಮಿಕರನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಮೇಯರ್ ಮಂಜುನಾಥರೆಡ್ಡಿ ಇಂದಿಲ್ಲಿ ತಿಳಿಸಿದರು. ಗುತ್ತಿಗೆ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ನಗರಕ್ಕೆ ಅಗತ್ಯವಿರುವ ಪೌರಕಾರ್ಮಿಕರನ್ನು ನೇಮಿಸಿಕೊಳ್ಳುವ ಸಂಬಂಧ ತೀರ್ಮಾನ ಕೈಗೊಳ್ಳಲಾಗಿದ್ದು, ಒಟ್ಟು 4 ಸಾವಿರ ಪೌರಕಾರ್ಮಿಕರನ್ನು ನೇಮಿಸಿಕೊಳ್ಳಲಾಗುವುದು ಎಂದರು. ಬಿಬಿಎಂಪಿ ವತಿಯಿಂದಲೇ ಪೌರಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಯೂಟ ನೀಡಲು ಸಿದ್ಧತೆ ನಡೆಸಲಾಗಿದೆ. ಮುಂದಿನ ತಿಂಗಳಿನಿಂದ ಈ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಪ್ರಕಟಿಸಿದರು.

ವೇತನ ಹೆಚ್ಚಳ ಐತಿಹಾಸಿಕ ನಿರ್ಣಯ : ನಾರಾಯಣ
ಬೆಂಗಳೂರು, ಆ.19-ಸಫಾಯಿ ಕರ್ಮಚಾರಿ ನಿಗಮ ಸ್ಥಾಪನೆ ಹಾಗೂ ವೇತನ ಹೆಚ್ಚಳ ಮಾಡುವ ಮೂಲಕ ರಾಜ್ಯ ಸರ್ಕಾರ ಐತಿಹಾಸಿಕ ನಿರ್ಣಯ ಕೈಗೊಂಡಿದೆ ಎಂದು ಸಫಾಯಿ ಕರ್ಮಚಾರಿ ಮುಖಂಡ ನಾರಾಯಣ ಹೇಳಿದರು. ಗುತ್ತಿಗೆ ಪೌರಕಾರ್ಮಿಕರ ರಾಜ್ಯಮಟ್ಟದ ಸಮಾವೇಶದಲ್ಲಿ ಮಾತನಾಡಿದ ಅವರು, ಇತರೆ ರಾಜ್ಯಕ್ಕೆ ಹೋಲಿಸಿದರೆ ಪೌರಕಾರ್ಮಿಕರಿಗೆ ನೀಡುತ್ತಿರುವ ವೇತನ ನಮ್ಮ ರಾಜ್ಯದಲ್ಲಿ ಹೆಚ್ಚಾಗಿದ್ದು, ನೆರೆ ರಾಜ್ಯಗಳಲ್ಲಿ 9,800ರಷ್ಟು ಮಾತ್ರ ವೇತನ ನೀಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯಸರ್ಕಾರದ ಈ ನಿರ್ಧಾರ ಐತಿಹಾಸಿಕ ನಿರ್ಧಾರವೆನಿಸಿದೆ. ಸಫಾಯಿ ಕರ್ಮಚಾರಿ ನಿಗಮ ಸ್ಥಾಪನೆಗೂ ಸರ್ಕಾರ ಮುಂದಾಗಿರುವುದು ಉತ್ತಮ ಬೆಳವಣಿಗೆ ಎಂದು ಸಂತಸ ವ್ಯಕ್ತಪಡಿಸಿದರು.

ರಾಜ್ಯಸರ್ಕಾರದ ಶೇ.24ರಷ್ಟು ಅನುದಾನದಲ್ಲಿ ಪೌರಕಾರ್ಮಿಕರ ಅಭಿವೃದ್ಧಿಗೆ ಶೇ.20ರಷ್ಟು ಖರ್ಚು ಮಾಡಲಾಗುತ್ತದೆ. ಆರೋಗ್ಯ ಭದ್ರತೆ, ಯೋಜನೆ ಜಾರಿಗೊಳಿಸಲಾಗುತ್ತಿದೆ. ವೇತನ ಹೆಚ್ಚಳದಂತಹ ಕ್ರಮಗಳನ್ನು ಕೈಗೊಂಡು ಅವರ ಜೀವನ ಮಟ್ಟ ಸುಧಾರಣೆಗೂ ಕ್ರಮಕೈಗೊಳ್ಳಲಾಗುತ್ತಿದೆ ಎಂದರು.  ಪ್ರಧಾನಿ ಮೋದಿಯವರು ಸ್ವಚ್ಛ ಭಾರತ್ ಅಭಿಯಾನದಲ್ಲಿ ಪೌರಕಾರ್ಮಿಕರ ಶ್ರಮವೇ ಹೆಚ್ಚಾಗಿದ್ದು, ಈ ಅಭಿಯಾನದ ಪ್ರಚಾರಕ್ಕೆ ಸೆಲಿಬ್ರಿಟಿಗಳನ್ನು ಬಳಸಿಕೊಳ್ಳುವ ಬದಲು ಪೌರಕಾರ್ಮಿಕರನ್ನೇ ಪ್ರಚಾರಕ್ಕೆ ಬಳಸಿಕೊಳ್ಳುವಂತೆ ನಾರಾಯಣ ಒತ್ತಾಯಿಸಿದರು.   ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್, ಪೌರಾಡಳಿತ ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಶಾಸಕ ಎಂ.ಕೆ.ಸೋಮಶೇಖರ್, ಮೇಯರ್ ಮಂಜುನಾಥರೆಡ್ಡಿ, ಪಿ.ರಮೇಶ್, ರಾಮಚಂದ್ರಪ್ಪ ಮತ್ತಿತರರು ಪಾಲ್ಗೊಂಡಿದ್ದರು.

► Follow us on –  Facebook / Twitter  / Google+

Facebook Comments

Sri Raghav

Admin