ಬಿಸಿಯೂಟದಿಂದ ಅಸ್ವಸ್ಥಗೊಂಡಿದ್ದ ಮಕ್ಕಳ ಆರೋಗ್ಯದಲ್ಲಿ ಚೇತರಿಕೆ

ಈ ಸುದ್ದಿಯನ್ನು ಶೇರ್ ಮಾಡಿ

meals

ಕೊಪ್ಪಳ, ಆ.17- ಬಿಸಿಯೂಟ ಸೇವಿಸಿದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ತಾಲ್ಲೂಕಿನ ಹಿರೇಬೊಮ್ಮನಾಳ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ನಿನ್ನೆ ಶಾಲೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕೊಡಿಸಲಾಗಿತ್ತು. ಸಂಜೆಯಾಗುತ್ತಿದ್ದಂತೆ ಕೆಲವರು ವಾಂತಿ ಮಾಡಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಶಿಕ್ಷಕರು ಆಹಾರ ಪಾತ್ರೆಗಳನ್ನು ನೋಡಿದಾಗ ಹಲ್ಲಿ ಬಿದ್ದಿರುವುದು ಪತ್ತೆಯಾಗಿದೆ.  ತಕ್ಷಣ ಎಚ್ಚೆತ್ತುಕೊಂಡ ಅವರು ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಸುಮಾರು 100ಕ್ಕೂ ಹೆಚ್ಚು ಮಂದಿ ಮಕ್ಕಳು ಅಸ್ವಸ್ಥಗೊಂಡಿದ್ದು, ಪೋಷಕರು ಆತಂಕಗೊಂಡಿದ್ದಾರೆ. ಗೋನಾಳ ಮತ್ತು ಹಿರೇವಂಕಲಕುಂಟಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇಂದು ಶಾಲೆಗೆ ರಜೆ ಘೋಷಿಸಲಾಗಿದೆ.

ವಿದ್ಯಾರ್ಥಿಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ಮಕ್ಕಳಿಗೆ ಆಹಾರವನ್ನು ತಂದ ಸಿಬ್ಬಂದಿಗಳು ಹಾಗೂ ಇದನ್ನು ಪೂರೈಸಿದ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಹಸೀಲ್ದಾರ್ ಸೂಚನೆ ನೀಡಿದ್ದಾರೆ.

► Follow us on –  Facebook / Twitter  / Google+

Facebook Comments

Sri Raghav

Admin