ಬಿಸಿಸಿಐ ಅಧ್ಯಕ್ಷರನ್ನು ವಜಾಗೊಳಿಸುವಂತೆ ಸುಪ್ರೀಂಗೆ ಲೋಧಾ ಸಮಿತಿ ಮೊರೆ

ಈ ಸುದ್ದಿಯನ್ನು ಶೇರ್ ಮಾಡಿ

Lodha-01

ನವದೆಹಲಿ, ಸೆ.28-ಸುಪ್ರೀಂಕೋರ್ಟ್ ನಿರ್ದೇಶನಗಳನ್ನು ಉಲ್ಲಂಘಿಸಿರುವ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ-ಬಿಬಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್, ಕಾರ್ಯದರ್ಶಿ ಅಜಯ್ ಶಿರ್ಕೆ ಸೇರಿದಂತೆ ಮಂಡಳಿಯ ಪದಾಧಿಕಾರಿಗಳು ಮತ್ತು ಉನ್ನತಾಧಿಕಾರಿಗಳನ್ನು ವಜಾಗೊಳಿಸುವಂತೆ ಲೋಧಾ ಸಮಿತಿ ಸರ್ವೋಚ್ಚ ನ್ಯಾಯಾಲಯದ ಮೊರೆ ಹೋಗಿದೆ.  ಬಿಸಿಸಿಐ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಈ ಕೂಡಲೇ ವಜಾಗೊಳಿಸಿ ಆ ಸ್ಥಾನಗಳಿಗೆ ಕ್ರಿಕೆಟ್ ಆಡಳಿತಗಾರರನ್ನು ಮಂಡಳಿಗೆ ನೇಮಿಸುವಂತೆ ಲೋಧಾ ಸಮಿತಿ ಸುಪ್ರೀಂಕೋರ್ಟ್‍ನನ್ನು ಇಂದು ಕೋರಿದೆ.
ಬಿಸಿಸಿಐ ಮತ್ತು ಅದರ ಪದಾಧಿಕಾರಿಗಳು ಸುಪ್ರೀಂಕೋರ್ಟ್ ನಿರ್ದೇಶನಗಳಿಗೆ ಬದ್ಧವಾಗಿಲ್ಲ. ಮನಸೋ ಇಚ್ಚೆ ವರ್ತಿಸುತ್ತಿರುವ ಅಧ್ಯಕ್ಷರು ಮತ್ತು ಕಾರ್ಯದರ್ಶಿಯವರು ಸರ್ವೋಚ್ಚ ನ್ಯಾಯಾಲಯದ ನೀತಿ-ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಸಮಿತಿ ಆರೋಪಿಸಿದೆ.

ಈ ಮನವಿಯನ್ನು ಪುರಸ್ಕರಿಸಿದ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಕೂರ್ ಅವರನ್ನು ಒಳಗೊಂಡ ಪೀಠವು ಇದು ಗಂಭೀರ ಆರೋಪಗಳಾಗಿವೆ ಮತ್ತು ಬಿಸಿಸಿಐ ನ್ಯಾಯಾಲಯದ ನಿರ್ದೇಶನಗಳನ್ನು ಪಾಲಿಸಬೇಕು ಎಂದು ಹೇಳಿದೆ.

► Follow us on –  Facebook / Twitter  / Google+

Facebook Comments

Sri Raghav

Admin