ಬಿಸಿಸಿಐ ಅಧ್ಯಕ್ಷ ಸ್ಥಾನದಿಂದ ಅನುರಾಗ್ ಠಾಕೂರ್‍ರಿಗೆ ಗೇಟ್ ಪಾಸ್ ನೀಡಿದ ಸುಪ್ರೀಂಕೋರ್ಟ್

ಈ ಸುದ್ದಿಯನ್ನು ಶೇರ್ ಮಾಡಿ

Anurag-Takur

ನವದೆಹಲಿ, ಜ.2- ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಅಧ್ಯಕ್ಷ ಅನುರಾಗ್ ಠಾಕೂರ್ ಅವರನ್ನು ಪದಚ್ಯುತಿಗೊಳಿಸಿ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ಲೋಧಾ ಕಮಿಟಿ ಶಿಫಾರಸ್ಸನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಇಂದು ಬಿಸಿಸಿಐನ ಅಧ್ಯಕ್ಷ ಅನುರಾಗ್ ಹಾಗೂ ಕಾರ್ಯದರ್ಶಿ ಅಜಯ್ ಶಿರ್ಕೆಯನ್ನು ಪದಚ್ಯುತಿಗೊಳಿಸಿ ಮಹತ್ವದ ಆದೇಶ ಹೊರಡಿಸಿದೆ.  ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಿದ್ದ ನ್ಯಾ.ಲೋಧಾ ಸಮಿತಿ ನೀಡಿದ್ದ ಶಿಫಾರಸ್ಸುಗಳನ್ನು ಜಾರಿ ಮಾಡದ ಹಿನ್ನಲೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಬಿಸಿಸಿಐ ಕಾರ್ಯದರ್ಶಿ ಅಜಯ್ ಶಿರ್ಕೆ ಅವರನ್ನು ಅವರ ಸ್ಥಾನದಿಂದ ವಜಾಗೊಳಿಸಲಾಗಿದೆ.

ಅಂತೆಯೇ ತೆರವಾಗಿರುವ ಅಧ್ಯಕ್ಷ ಸ್ಥಾನಕ್ಕೆ ಬಿಸಿಸಿಐ ಉಪಾಧ್ಯಕ್ಷರನ್ನು ಹಂಗಾಮಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ. ಅಂತೆಯೇ ಲೋಧಾ ಸಮಿತಿ ಶಿಫಾರಸ್ಸುಗಳನ್ನು ಜಾರಿ ಮಾಡುವಂತೆ ಆದೇಶವಿದ್ದರೂ, ಶಿಫಾರಸ್ಸುಗಳನ್ನು ಜಾರಿ ಮಾಡದ ಬಿಸಿಸಿಐ ವಿರುದ್ಧ ನ್ಯಾಯಾಂಗ ನಿಂದನೆ ಏಕೆ ದಾಖಲಿಸಬಾರದು ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಅಂತೆಯೇ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಕಾರ್ಯದರ್ಶಿ ಅಜಯ್ ಶಿರ್ಕೆ ಅವರಿಗೆ ಸುಪ್ರೀಂ ಕೋರ್ಟ್ ಷೋಕಾಸ್ ನೋಟಿಸ್ ಜಾರಿ ಮಾಡಿದ್ದು, ನಿಮ್ಮ ವಿರುದ್ಧ ನಾವೇಕೆ ತನಿಖೆಗೆ ಆದೇಶಿಸಬಾರದು? ಎಂದು ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠ ಪ್ರಶ್ನಿಸಿದೆ. ಅಲ್ಲದೆ ಸುಪ್ರೀಂ ಕೋರ್ಟ್ ಕೇಳುವ ಪ್ರಶ್ನೆಗಳಿಗೆ ಕಡ್ಡಾಯವಾಗಿ ಉತ್ತರಿಸಬೇಕು ಎಂದು ಹೇಳಿದೆ. ಅಂತೆಯೇ ಮುಂದಿನ ವಿಚಾರಣೆಯನ್ನು ಜನವರಿ 19ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.

ನ್ಯಾ. ಲೋಧಾ ಸಮಿತಿ ಶಿಫಾರಸ್ಸನ್ನು ಜಾರಿ ಮಾಡದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ. ಇದ್ರಿಂದಾಗಿ ಬಿಸಿಸಿಐಗೆ ಭಾರೀ ಹಿನ್ನೆಡೆಯಾಗಿದೆ. ಹಿರಿಯ ಉಪಾಧ್ಯಕ್ಷರಿಗೆ ತಾತ್ಕಾಲಿಕವಾಗಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ಹೊತ್ತುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿದೆ. ನಿಮ್ಮ ವಿರುದ್ಧ ಯಾಕೆ ತನಿಖೆಗೆ ಆದೇಶ ಮಾಡಬಾರದು? ನಮ್ಮ ಪ್ರಶ್ನೆಗೆ ನೀವು ಉತ್ತರ ನೀಡಿ ಎಂದು ಸುಪ್ರೀಂ ಕೋರ್ಟ್ ಅಜಯ್ ಹಾಗೂ ಅನುರಾಗ್ ಅವರಿಗೆ ಪ್ರಶ್ನೆ ಕೇಳಿದೆ.

Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

Sri Raghav

Admin