ಬಿಸಿಸಿಐಗೆ ಸುಪ್ರೀಂ ಶಾಕ್ : ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಹಣ ವರ್ಗಾವಣೆಗೆ ಬ್ರೇಕ್

ಈ ಸುದ್ದಿಯನ್ನು ಶೇರ್ ಮಾಡಿ

BCCI-01

ಮುಂಬೈ, ಅ.7– ರಾಜ್ಯ ಕ್ರಿಕೆಟ್ ಸಮಿತಿಗಳಿಗೆ ಬಿಸಿಸಿಐ ಯಾವುದೇ ಮೂಲದ ಹಣ ವರ್ಗಾವಣೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಧ್ಯಂತರ ತೀರ್ಪು ನೀಡಿದೆ. ದಸರಾ ಹಬ್ಬದ ಪ್ರಯುಕ್ತ ಕೋರ್ಟ್ ಕಲಾಪಗಳಿಗೆ ಒಂದು ವಾರದ ಕಾಲ ರಜೆ ಇರುವುದರಿಂದ ಪ್ರಕರಣದ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 17ಕ್ಕೆ ಮುಂದೂಡಿದೆ. ಲೋಧಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಇಂದು ಮಧ್ಯಾಹ್ನ ನಡೆಸಿದ ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಠಾಗೋರ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠವು ಹಲವು 17 ರಾಜ್ಯ ಕ್ರಿಕೆಟ್ ಸಂಸ್ಥೆಗಳಿಗೆ ಬಿಸಿಸಿಐ ಯಾವುದೇ ರೀತಿಯ ಹಣಕಾಸಿನ ನೆರವು ನೀಡಬಾರದು ಎಂದು ಸೂಚಿಸಿದರು.

ಲೋಧಾ ಸಮಿತಿಯ ಶಿಫಾರಸುಗಳಿಗೆ ಸಂಬಂಧಪಟ್ಟಂತೆ ತಮ್ಮ ನಿಲುವನ್ನು ಸ್ಪಷ್ಟವಾಗಿ ತಿಳಿಸಲು ವೈಯಕ್ತಿಕ ಪ್ರಮಾಣ ಪತ್ರವನ್ನು ಸಲ್ಲಿಸುವಂತೆ ಮಂಡಳಿ ಅಧ್ಯಕ್ಷ ಅನುರಾಗ್‍ಠಾಕೂರ್‍ರವರಿಗೆ ಸಿಜಿಐ ಠಾಕೂರ್ ನಿರ್ದೇಶನ ನೀಡಿದರು. ಕೇಪ್‍ಟೌನ್‍ನಲ್ಲಿ ಅಕ್ಟೋಬರ್ 10 ರಿಂದ 14ರವರೆಗೆ ನಡೆಯಲಿರುವ ಐಸಿಸಿ ಮಂಡಳಿ ಸಭೆಯಲ್ಲಿ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಹಾಗೂ ಸೆಕ್ರೆಟರಿ ಅಜಯ್ ಶಿರ್ಕೆ ಪಾಲ್ಗೊಳ್ಳಲಿದ್ದಾರೆ. ಇದೆ ವೇಳೆ ಲೋಧಾ ಕಮಿಟಿಯ ಶಿಫಾರಸ್ಸನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ

► Follow us on –  Facebook / Twitter  / Google+

Facebook Comments

Sri Raghav

Admin