ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಕೆಣಕಿದ ರಮ್ಯಾ
ಮಂಡ್ಯ ಆ. 30 : ಪಾಕಿಸ್ತಾನ ಹಾಗೂ ಮಂಗಳೂರು ಕುರಿತಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಮತ್ತೊಂದು ಹೇಳಿಕೆ ನೀಡಿದ್ದು, ಚರ್ಚೆಗೆ ಕಾರಣವಾಗಿದೆ. ರಮ್ಯಾ ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಕುರಿತಾಗಿ ವಿವಾದದ ಹೇಳಿಕೆ ನೀಡಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ಸಿಗಲು ಕಾಂಗ್ರೆಸ್ ಕಾರಣ. ಕಾಂಗ್ರೆಸ್ ಪಕ್ಷ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿತ್ತು. ಆದರೆ, ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿರಲಿಲ್ಲ. ಅವರು ಬ್ರಿಟೀಷರ ಜೊತೆ ಸೇರಿಕೊಂಡಿದ್ದರು. ನಿಜವಾದ ದೇಶ ಪ್ರೇಮ ಕ್ರಿಯೆಯಲ್ಲಿ ಇರಬೇಕು ಎಂದು ಹೇಳಿದ್ದಾರೆನ್ನಲಾಗಿದೆ.
ಇದಕ್ಕೂ ಮೊದಲು, ಪಾಕಿಸ್ತಾನ ಒಳ್ಳೆಯ ದೇಶ. ಅಲ್ಲಿಯೂ ಶಾಂತಿಪ್ರಿಯ, ಒಳ್ಳೆಯ ಜನರಿದ್ದಾರೆ. ಮಂಗಳೂರಿನಲ್ಲಿ ನರಕವಿದೆ ಎಂದೆಲ್ಲಾ ರಮ್ಯಾ ಅವರು ಹೇಳಿದ್ದು, ವಿವಾದವಾಗಿ ಪರ, ವಿರೋಧ ಚರ್ಚೆಗೆ ಕಾರಣವಾಗಿತ್ತು. ಅವರ ವಿರುದ್ಧ ಪ್ರತಿಭಟನೆ ಕೂಡ ನಡೆಸಲಾಗಿತ್ತು.
► Follow us on – Facebook / Twitter / Google+