ಬೀಜಿಂಗ್ : ಅಕ್ರಮ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಸ್ಫೋಟಕ್ಕೆ 22 ಕಾರ್ಮಿಕರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Coal-China

ಬೀಜಿಂಗ್, ಡಿ.1-ಅಕ್ರಮ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಿಂದಾಗಿ 22 ಕಾರ್ಮಿಕರು ಮೃತಪಟ್ಟಿರುವ ಘಟನೆ ಚೀನಾದ ಈಶಾನ್ಯ ಭಾಗದ ಹೆಲಾಂಗ್‍ಜಿಯಾಂಗ್ ಪ್ರಾಂತ್ಯದಲ್ಲಿ ಸಂಭವಿಸಿದೆ. ಇದು ದೇಶದ ಗಣಿ ಉದ್ಯಮದಲ್ಲಿ ಇತ್ತೀಚೆಗೆ ಸಂಭವಿಸಿದ ಎರಡನೇ ದುರಂತವಾಗಿದೆ.  ಕ್ವಿಟೈ ಪಟ್ಟಣದ ಖಾಸಗಿ ಕಲ್ಲಿದ್ದಲು ಗಣಿಯಲ್ಲಿ ಮಂಗಳವಾರ ಭಾರೀ ಸ್ಫೋಟ ಸಂಭವಿಸಿತ್ತು. ಇದೇ ಸಂದರ್ಭದಲ್ಲಿ ಕಾರ್ಯನಿರ್ವಹಿಸುತ್ತಿದ್ದ 22 ಮಂದಿ ಕಾರ್ಮಿಕರು ಗಣಿಯ ಗರ್ಭದಲ್ಲಿ ಸಿಲುಕಿದ್ದರು. ಅವರನ್ನು ರಕ್ಷಿಸುವ ಕಟ್ಟ ಕಡೆ ಪ್ರಯತ್ನ ವಿಫಲಗೊಂಡಿದ್ದು, ಅವರೆಲ್ಲರೂ ಮೃತಪಟ್ಟಿರುವುದಾಗಿ ಭಾವಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌಜೌವು ಪ್ರಾಂತ್ಯದಲ್ಲಿ ಅ.31ರಂದು ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ್ದ ಸ್ಫೋಟದಲ್ಲಿ 33 ಮಂದಿ ಮೃತಪಟ್ಟಿದ್ದರು.

> ಯಾವ ಸುದ್ದಿಯನ್ನೂ ಮಿಸ್ ಮಾಡ್ಕೋಬೇಡಿ… :  Eesanje News 24/7 ನ್ಯೂಸ್ ಆ್ಯಪ್ –  Click Here to Download 

Facebook Comments

( ಎಚ್ಚರಿಕೆ..! : ಈ ಸಂಜೆ ಸುದ್ದಿಗಳನ್ನು ನಕಲು ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ) > #ವಾಟ್ಸಾಪ್‌ನಲ್ಲಿ ಸುದ್ದಿಗಳನ್ನು ಪಡೆಯಲು 7795582478 ಸಂಖ್ಯೆಯನ್ನು ನಿಮ್ಮ ಮೊಬೈಲ್ ನಲ್ಲಿ SAVE ಮಾಡಿಕೊಂಡು HI EESANJE ಎಂದು ಸಂದೇಶ ಕಳಿಸಿ

Sri Raghav

Admin