ಬೀದರ್ ನಲ್ಲೂ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

ಈ ಸುದ್ದಿಯನ್ನು ಶೇರ್ ಮಾಡಿ

Bidar

ಬೀದರ್, ಸೆ.23- ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರೈತರು ಬೆಳೆದ ಲಕ್ಷಾಂತರ ರೂ. ಮೌಲ್ಯದ ಸೋಯಾ ಉದ್ದು ಬೆಳೆ ಸಂಪೂರ್ಣ ನಾಶವಾಗಿದ್ದು ರೈತರು ಚಿಂತಾಕ್ರಾಂತರಾಗಿದ್ದಾರೆ. ತಗ್ಗು ಪ್ರದೇಶದ ಮನೆಗಳಲ್ಲಿ ಭಾರೀ ಪ್ರಮಾಣದ ನೀರು ಹೊಕ್ಕಿದ್ದು, ಹೊರಹಾಕಲು ನಾಗರಿಕರು ಹರಸಾಹಸ ಪಡುತ್ತಿದ್ದಾರೆ. ಸಾವಿರಾರು ಎಕರೆ ಪ್ರದೇಶದಲ್ಲಿ ಮಳೆ ನೀರು ನಿಂತಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಕಮಠಾಣ ಗ್ರಾಮದಲ್ಲಿ ಎರಡು ಮನೆಗಳ ಗೋಡೆಗಳು ಕುಸಿದುಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಭಾಲ್ಕಿ ಜಿಲ್ಲೆಯ ನೂರಾರು ಹಳ್ಳಿಗಳು ಜಲಾವೃತವಾಗಿದ್ದು, ನಾಗರಿಕರು ಮನೆಯಿಂದ ಹೊರಬರಲಾರದ ಸ್ಥಿತಿ ಉಂಟಾಗಿದೆ. ತಗ್ಗು ಪ್ರದೇಶದಲ್ಲಿನ ಜನರನ್ನು ಬೇರೆಡೆಗೆ ಸ್ಥಳಾಂತರಿಸಲು ಜಿಲ್ಲಾಡಳಿತ ಎಲ್ಲ ಅಗತ್ಯ ಕ್ರಮ ಕೈಗೊಂಡಿದೆ. ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಹುತೇಕ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಉಂಟಾಗಿದೆ. ಸಾಂಕ್ರಾಮಿಕ ರೋಗಗಳು ಹರಡದಂತೆ ಆರೋಗ್ಯ ಇಲಾಖೆ ಎಲ್ಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ. ಸಂಕಷ್ಟದಲ್ಲಿರುವ ಜಾನುವಾರುಗಳನ್ನು ಬೇರೆಡೆ ಸಾಗಿಸಲು ಕ್ರಮ ಕೈಗೊಳ್ಳಲಾಗಿದೆ. ಮಳೆ ಇನ್ನೂ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕೆಲವು ಕಡೆ ಸಂತ್ರಸ್ತರಿಗಾಗಿ ಗಂಜಿ ಕೇಂದ್ರಗಳನ್ನು ತೆರೆಯಲು ಜಿಲ್ಲಾಡಳಿತ ಕ್ರಮ ಕೈಗೊಂಡಿದೆಯಲ್ಲದೆ ಸತತ ಸಂಪರ್ಕದಲ್ಲಿದೆ.

► Follow us on –  Facebook / Twitter  / Google+

Facebook Comments

Sri Raghav

Admin