ಬುಡಕಟ್ಟು ಜನಾಂಗ-ಪೊಲೀಸರ ನಡುವೆ ಘರ್ಷಣೆ : ಬೇಟೆಗಾರ ಬಲಿ, 8 ಪೊಲೀಸರಿಗೆ ಗಾಯ

ಈ ಸುದ್ದಿಯನ್ನು ಶೇರ್ ಮಾಡಿ

Police--01

ಜೈಪುರ,ಏ.22-ರಾಜಸ್ಥಾನದ ಸಿಲಾರಿಯ ಗ್ರಾಮದ ಬಳಿ ಅಲೆಮಾರಿ ಬುಡಕಟ್ಟು ಜನಾಂಗ ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಒಬ್ಬ ಬೇಟೆಗಾರ ಸಾವನ್ನಪ್ಪಿದ್ದು , 8 ಮಂದಿ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.   ಪೂಸ ದಾಳಿಯಲ್ಲಿ ಸಾವನ್ನಪ್ಪಿರುವ ಬೇಟೆಗಾರನಾಗಿದ್ದು , ಕಾಡು ಪ್ರಾಣಿಗಳ ಬೇಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು ಬಂಧಿಸುವ ಸಲುವಾಗಿ ನಿನ್ನೆ ಸಂಜೆ ಸಿಲಾರಿಯಾ ಗ್ರಾಮಕ್ಕೆ ಪೊಲೀಸರು ತೆರಳಿದ್ದರು.

ಈ ವೇಳೆ ಪೂಸಾನನ್ನು ಬಂಧಿಸಲು ವಿರೋಧ ವ್ಯಕ್ತಪಡಿಸಿದ ಅಲೆಮಾರಿ ಬುಡಕಟ್ಟು ಜನಾಂಗದ ಕೆಲವರು ಪೊಲೀಸರ ಮೇಲೆ ಸ್ವಯಂ ತಯಾರಿಕ ಅಸ್ತ್ರಗಳಿಂದ ದಾಳಿ ನಡೆಸಿದ್ದಾರೆ. ಇದರಿಂದ ಆಕ್ರೋಶಗೊಂಡ ಪೊಲೀಸರು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಬೇಟೆಗಾರ ಪೂಸನಿಗೆ ಗುಂಡು ತಗುಲಿ ತೀವ್ರ ರಕ್ತಸ್ರಾವ ಉಂಟಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ನಾಗಪುರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪರೀಸ್ ದೇಶ್‍ಮುಖ್ ತಿಳಿಸಿದ್ದಾರೆ.

< Eesanje News 24/7 ನ್ಯೂಸ್ ಆ್ಯಪ್  >

 Click Here to Download  :  Android / iOS  

Facebook Comments

Sri Raghav

Admin