ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸಿದರೆ ಕ್ರಿಮಿನಲ್ ಕೇಸ್

ಈ ಸುದ್ದಿಯನ್ನು ಶೇರ್ ಮಾಡಿ

Adds--01

ಬೆಂಗಳೂರು, ಸೆ.25- ನಗರದಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗವುದು ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಜಾಹೀರಾತು, ಪ್ಲೆಕ್ಸ್‍ಗಳ ಹಾವಳಿ ಹೆಚ್ಚಾಗುತ್ತಿದ್ದು, ಅದಕ್ಕೆ ಕಡಿವಾಣ ಹಾಕಲು ಯಾವುದೇ ಕ್ರಮ ಕೈಗೊಂಡರೂ ಸಾಧ್ಯವಾಗುತ್ತಿಲ್ಲ. ಹೀಗಾಗಿ ಯಾರಾದರೂ ಅನಧಿಕೃತ ಜಾಹೀರಾತು ಅಳವಡಿಸಿದರೆ ಅಂತಹವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಿಳಿಸಿದರು.  ನಗರದಲ್ಲಿ ಈಗಾಗಲೇ ಅಳವಡಿಸಿರುವ ಅನಧಿಕೃತ ಜಾಹೀರಾತುಗಳನ್ನು ತೆರವುಗೊಳಿಸಲಾಗುತ್ತಿದೆ. ಇನ್ನು ಮುಂದೆ ಜಾಹೀರಾತು ಹಾಕಿದರೆ ಸಂಸ್ಥೆಗಳ ಬಗ್ಗೆ ಮಾಹಿತಿ ಕಲೆ ಹಾಕಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದರು.

Facebook Comments

Sri Raghav

Admin