ಬೆಂಗಳೂರಲ್ಲಿ ನಿರ್ಮಾಣ ಹಂತದ ಬಹುಮಹಡಿ ಕಟ್ಟಡ ಕುಸಿತ : ಇಬ್ಬರ ಸಾವು

ಈ ಸುದ್ದಿಯನ್ನು ಶೇರ್ ಮಾಡಿ

Building-01

ಬೆಂಗಳೂರು, ಅ.5- ಬೆಂಗಳೂರಿನ ಬೆಳ್ಳಂದೂರು ಗೇಟ್ ಬಳಿ ಬುಧವಾರ ನಿರ್ಮಾಣ ಹಂತದ ಐದು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಅವಶೇಷಗಳಡಿ ಸಿಲುಕಿ ಸಾವನ್ನಪ್ಪಿದವರ ಸಂಖ್ಯೆ ಇದೀಗ ಎರಡಕ್ಕೇರಿದೆ. ಕಾಮಗಾರಿ ವೇಳೆ ಏಕಾಏಕಿ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಇನ್ನೂ ನಾಲ್ಕರಿಂದ ಐದು ಮಂದಿ ಸಿಲುಕಿರುವ ಸಾಧ್ಯತೆ ಇದೆ ಎಂದು ರಕ್ಷಣಾ ಸಿಬ್ಬಂದಿ ತಿಳಿಸಿದ್ದಾರೆ.  ಘಟನಾ ಸ್ಥಳಕ್ಕೆ ಐದು ಅಗ್ನಿ ಶಾಮಕ ದಳದ ವಾಹನಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗುತ್ತಿದೆ. ಈಗಗಾಲೇ 8 ವರ್ಷದ ಓರ್ವ ಬಾಲಕ ಸೇರಿದಂತೆ ನಾಲ್ವರನ್ನು ರಕ್ಷಿಸಲಾಗಿದ್ದು, ಇನ್ನೂ ನಾಲ್ವರು ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ ಕಟ್ಟಡ ಕುಸಿಯುವುದಕ್ಕೂ ಮುನ್ನ ದೊಡ್ಡ ಸ್ಫೋಟದ ಶಬ್ದ ಕೇಳಿ ಬಂತು ಎಂದು ತಿಳಿದುಬಂದಿದೆ.

Building

ಸುದ್ದಿ ತಿಳಿಯುತ್ತಿದ್ದಂತೆ ಎಚ್.ಎಸ್.ಆರ್.ಲೇಔಟ್ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮೂರು ವಾಹನಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ನಿರ್ಮಾಣ ಹಂತದ ಕಟ್ಟಡ ಪಕ್ಕದ ಖಾಲಿ ನಿವೇಶನಕ್ಕೆ ಉರುಳಿದೆ. ಈ ಕಟ್ಟಡ ಒಂದು ವೇಳೆ ರಸ್ತೆಗೆ ಉರುಳಿದ್ದರೆ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಘಟನೆಯಿಂದಾಗಿ ಪಕ್ಕದ ಕಟ್ಟಡಕ್ಕೂ ಹಾನಿಯಾಗಿದೆ.  ನೆಲ ಅಂತಸ್ತಿನಲ್ಲಿ ಕಾರೊಂದು ನಿಲ್ಲಿಸಲಾಗಿತ್ತು. ಅದೂ ಸಹ ಕಟ್ಟಡದ ಅವಶೇಷಗಳಡಿ ಸಿಲುಕಿದ್ದು, ಅದರಲ್ಲಿ ಚಾಲಕನಿದ್ದನೋ, ಇಲ್ಲವೋ ಎಂಬುದು ಸದ್ಯ ತಿಳಿದುಬಂದಿಲ್ಲ.

DSC_8523

DSC_8532

DSC_8568

DSC_8607

DSC_8640

DSC_8660

DSC_8676

► Follow us on –  Facebook / Twitter  / Google+

Facebook Comments

Sri Raghav

Admin