ಬೆಂಗಳೂರಲ್ಲಿ ಬಿಪಿಎಲ್ ಕುಟುಂಬಗಳಿಗೆ 1ಲಕ್ಷ ನಿರ್ಮಾಣ, ಆನ್‍ಲೈನ್‍ನಲ್ಲೆ ಅರ್ಜಿ ಹಾಕಿ

ಈ ಸುದ್ದಿಯನ್ನು ಶೇರ್ ಮಾಡಿ

Dream-Home--01

ಬೆಂಗಳೂರು, ಅ.26- ಬಡತನರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಶಾಶ್ವತ ಸೂರು ಒದಗಿಸಲು ಬೆಂಗಳೂರು ಮಹಾನಗರದಲ್ಲಿ ಒಂದು ಲಕ್ಷ ಮನೆ ನಿರ್ಮಾಣ ಮಾಡುತ್ತಿದ್ದು, ನವೆಂಬರ್ 15 ರಿಂದ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಇಂದು ಒಂದು ಲಕ್ಷ ವಸತಿ ಯೋಜನೆ ಅನುಷ್ಠಾನ ಕುರಿತು ಸಚಿವರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಐದು ವರ್ಷಕ್ಕಿಂತ ಹೆಚ್ಚು ಕಾಲ ವಾಸಿಸುತ್ತಿರುವ ಕುಟುಂಬಗಳು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದರು.

Facebook Comments

Sri Raghav

Admin